ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇ-ಮೇಲ್

Update: 2024-10-20 15:02 GMT

ಬೆಳಗಾವಿ : ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಇಡುವುದಾಗಿ ಇ-ಮೇಲ್ ಮೂಲಕ‌ ಸಂದೇಶ ಕಳಿಸಲಾಗಿದೆ. ಇದರಿಂದ ಎಚ್ಚೆತ್ತ ಅಧಿಕಾರಿಗಳು‌ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಿದ್ದಾರೆ.

ವಿಮಾನ ನಿಲ್ದಾಣದ‌ ನಿರ್ದೇಶಕ ತ್ಯಾಗರಾಜ್ ಎಂಬವರ ಇಮೇಲ್‌ಗೆ ಅಪರಿಚಿತರಿಂದ ಬೆದರಿಕೆ ಪತ್ರದ‌ ಇ-ಮೇಲ್ ಬಂದಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ತ್ಯಾಗರಾಜ ಅವರು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News