6ರಿಂದ 10ನೇ ತರಗತಿಯ ಗಣಿತ, ವಿಜ್ಞಾನ ವಿಷಯದಲ್ಲಿ ಸಿಬಿಎಸ್‍ಇ ಪಠ್ಯಕ್ರಮ ಅಳವಡಿಕೆ
Update: 2024-12-16 18:13 GMT
ಬೆಳಗಾವಿ : ಪ್ರಸ್ತುತ ರಾಜ್ಯ ಪಠ್ಯಕ್ರಮದ 6 ರಿಂದ 10ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್‍ಇ ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸೋಮವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಎಂ.ಎಲ್.ಅನಿಲಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಆರ್‍ಟಿಇ ಕಾಯ್ದೆಯ ಅನುಷ್ಠಾನದಿಂದ 1 ರಿಂದ 8ನೇ ತರಗತಿಯವರೆಗೆ ಪ್ರವೇಶ ಶುಲ್ಕವನ್ನು ಸರಕಾರವೇ ನೀಡುತ್ತಿದ್ದು, 8ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೂ ಈ ಯೋಜನೆಯನ್ನು ವಿಸ್ತರಿಸುವ ಪ್ರಸ್ತಾವನೆಯು ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.