ಬೆಳಗಾವಿ ಅಧಿವೇಶನ | ಅಮಿತ್‌ ಶಾ ಹೇಳಿಕೆಗೆ ವಿರೋಧ : ಸದನದಲ್ಲಿ ಅಂಬೇಡ್ಕರ್ ಭಾವಚಿತ್ರ ಇಟ್ಟು ಕಾಂಗ್ರೆಸ್‌ ಪ್ರತಿಭಟನೆ

Update: 2024-12-19 10:17 GMT

ಬೆಳಗಾವಿ : ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನ ಮಾಡಿರುವುದನ್ನು ವಿರೋಧಿಸಿ ಆಡಳಿತ ಪಕ್ಷದ ಕಾಂಗ್ರೆಸ್‌ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಕಲಾಪದ ವೇಳೆ ಅಮಿತ್‌ ಶಾ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಕಾಂಗ್ರೆಸ್ ಶಾಸಕರು ಅಂಬೇಡ್ಕರ್ ಭಾವಚಿತ್ರ ಪ್ರದರ್ಶಿಸಿ, ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು.

ಈ ವೇಳೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಅಮಿತ್ ಶಾ ಅವರನ್ನು ಸಮರ್ಥಿಸಿ ಸದನದಿಂದ ಹೊರ ನಡೆದರು. ಬಳಿಕ ಆಡಳಿತ ಪಕ್ಷದ ಸದಸ್ಯರು ತಮ್ಮ ಆಸನಗಳ ಎದುರು ಅಂಬೇಡ್ಕರ್ ಅವರ ಭಾವಚಿತ್ರವನ್ನು ಜೋಡಿಸಿಟ್ಟರು.

 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News