ಬೆಳಗಾವಿ ಅಧಿವೇಶನ | ಸಿಎಜಿ ವರದಿ ಸೇರಿ ವಿವಿಧ ವಿಧೇಯಕಗಳ ಮಂಡನೆ

Update: 2024-12-12 17:46 GMT

ಬೆಳಗಾವಿ : ವಿಧಾನ ಸಭೆಯಲ್ಲಿ ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕ ಪರಿಶೋಧಕರ ವರದಿಗಳು ಹಾಗೂ ವಿವಿಧ 11 ವಿಧೇಯಕಗಳನ್ನು ಸಚಿವರುಗಳು ಮಂಡಿಸಿದರು.

2024ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕ, 2024ನೇ ಸಾಲಿನ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕ, 2024ನೇ ಸಾಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಎರಡನೇ ತಿದ್ದುಪಡಿ) ವಿಧೇಯಕ, 2024ನೇ ಸಾಲಿನ ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಗಳ ವಿಧೇಯಕ, 2024ನೇ ಸಾಲಿನ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ಎರಡನೇ ತಿದ್ದುಪಡಿ) ವಿಧೇಯಕ, 2024ನೇ ಸಾಲಿನ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, 2024ನೇ ಸಾಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ, 2024ನೇ ಸಾಲಿನ ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ, 2024ನೇ ಸಾಲಿನ ಕರ್ನಾಟಕ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ವಿಧೇಯಕ, 2024ನೇ ಸಾಲಿನ ಚಾಣಕ್ಯ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ, 2024ನೇ ಸಾಲಿನ ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಮಯನ ಹಾಗೂ ನಿಯಂತ್ರಣ (ತಿದ್ದುಪಡಿ) ವಿಧೇಯಕಗಳನ್ನು ಮಂಡಿಸಲಾಯಿತು.

ಸಚಿವರುಗಳಾದ ಜಿ.ಪರಮೇಶ್ವರ, ಕೃಷ್ಣ ಭೈರೇಗೌಡ, ಪ್ರೀಯಾಂಕ ಖರ್ಗೆ, ಸಂತೋಷ ಲಾಡ್, ಡಾ.ಎಂ.ಸಿ.ಸುಧಾಕರ್ ಅವರುಗಳು ಮಂಡಿಸಿದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News