ಜ.14ರಿಂದ ಪಂಚಮಸಾಲಿ 2‘ಎ’ ಮೀಸಲಾತಿಗೆ ಆಗ್ರಹಿಸಿ ಎಂಟನೇ ಹಂತದ ಹೋರಾಟಕ್ಕೆ ಚಾಲನೆ : ಜಯಮೃತ್ಯುಂಜಯ ಸ್ವಾಮಿ

Update: 2025-01-11 16:42 GMT

ಜಯಮೃತ್ಯುಂಜಯ ಸ್ವಾಮಿ

ಬೆಳಗಾವಿ : ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮತ್ತು ಲಿಂಗಾಯತ ಉಪ ಪಂಗಡಗಳಿಗೆ ಇತರೆ ಹಿಂದುಳಿದ ವರ್ಗಗಳ ಮೀಸಲಾತಿ ಕಲ್ಪಿಸಬೇಕೆಂದು ಆಗ್ರಹಿಸಿ ಜ.14ರಂದು ಕೂಡಲಸಂಗಮದ ಪಂಚಮಸಾಲಿ ಪೀಠದಿಂದ ಎಂಟನೇ ಹಂತದ ಹೋರಾಟಕ್ಕೆ ಚಾಲನೆ ನೀಡಲಾಗುವುದು ಎಂದು ಪೀಠಾಧ್ಯಕ್ಷ  ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದಿನ ಬೆಳಗಾವಿಯ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಸರಕಾರದ ಕುಮ್ಮಕ್ಕಿನಿಂದ ಪೊಲೀಸರು ನಮ್ಮ ಸಮುದಾಯದ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿದರು. ಲಾಠಿಚಾರ್ಜ್ ವೇಳೆ ಗಾಯಗೊಂಡ ಹೋರಾಟಗಾರರಿಗೆ ‘ಲಿಂಗಾಯತ ಪಂಚಮಸಾಲಿ ಮೀಸಲಾತಿ ವೀರ' ಎಂಬ ಬಸವರಕ್ಷೆ ಕೊಡುತ್ತೇವೆ ಎಂದರು.

ಎಂಟನೇ ಹಂತದ ಹೋರಾಟದಲ್ಲಿ ರಾಜ್ಯಾದ್ಯಂತ ‘ಪಂಚಮಸಾಲಿ ಪ್ರತಿಜ್ಞಾ ಕ್ರಾಂತಿ ಅಭಿಯಾನ' ಮಾಡುತ್ತೇವೆ. ಸಮುದಾಯದ ಮನೆ ಮನೆಗೆ ತೆರಳಿ ಅಭಿಪ್ರಾಯ ಸಂಗ್ರಹಿಸಿ ನಮ್ಮ ಗುರಿ ಸಾಧಿಸುತ್ತೇವೆ. ಪಂಚಮಸಾಲಿ ಸಮುದಾಯದವರು ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸ್ವಾಮೀಜಿ ಮನವಿ ಮಾಡಿದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News