ದೇಶಿಯ ಕುರಿ ತಳಿಗಳ ಸಂರಕ್ಷಣೆಗೆ ತಳಿ ಸಂವರ್ಧನಾ ಕೇಂದ್ರ ಸ್ಥಾಪನೆ : ಕೆ.ವೆಂಕಟೇಶ್
Update: 2024-12-18 17:08 GMT
ಬೆಳಗಾವಿ (ಸುವರ್ಣ ವಿಧಾನಸೌಧ) : ರಾಜ್ಯದಲ್ಲಿ ವಿನಾಶದ ಅಂಚಿನಲ್ಲಿರುವ ದೇಶಿಯ ಕುರಿ ತಳಿಗಳನ್ನು ಸಂರಕ್ಷಿಸಲು ತಳಿ ಸಂವರ್ಧನಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ.
ಬುಧವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಎಸ್.ಯತೀಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 2019ನೇ ಜಾನುವಾರು ಗಣತಿ ಪ್ರಕಾರ ರಾಜ್ಯದಲ್ಲಿ 110.51 ಲಕ್ಷ ಕುರಿಗಳು ಮತ್ತು 61.69 ಲಕ್ಷ ಮೇಕೆಗಳಿರುತ್ತವೆ. ಕರ್ನಾಟಕದಲ್ಲಿ ಕೆಂಗುರಿ, ಡೆಕನಿ, ಯಳಗ ಕುರಿ ತಳಿಗಳು ಮತ್ತು ನಂದಿ ದುರ್ಗ, ಬಿದರಿ ಮೇಕೆ ತಳಿಗಳಿವೆ ಎಂದರು.
ವಿನಾಶದ ಅಂಚಿನಲ್ಲಿರುವ ದೇಶಿಯ ಕುರಿ ತಳಿಗಳನ್ನು ಸಂರಕ್ಷಿಸುವ ಉದ್ದೇಶದಿಂದ ರಾಜ್ಯದಲ್ಲಿ 5 ಕುರಿ/ಮೇಕೆ ತಳಿ ಸಂವರ್ಧನಾ ಕೇಂದ್ರಗಳನ್ನು ಸ್ಥಾಪಿಸಿ ರೈತರಿಗೆ ಕುರಿ/ಮೇಕೆ ಮರಿಗಳನ್ನು ತಳಿ ಉನ್ನತಿಗಾಗಿ ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ ಎಂದು ಕೆ.ವೆಂಕಟೇಶ್ ಹೇಳಿದರು.