‘ಕಾರಂಜಾ ಜಲಾಶಯ’ ಮುಳುಗಡೆ ಸಂತ್ರಸ್ತರ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚನೆ : ಮುಖ್ಯಮಂತ್ರಿ

Update: 2024-12-19 10:35 GMT

ಬೆಳಗಾವಿ (ಸುವರ್ಣ ವಿಧಾನಸೌಧ) : ಬೀದರ್‌ನ ಕಾರಂಜಾ ಜಲಾಶಯ ಯೋಜನೆಯ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತಾದ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಗುರುವಾರ ಸುವರ್ಣ ವಿಧಾನಸೌಧದಲ್ಲಿ ಕಾರಂಜಾ ಯೋಜನೆ ಸಂತ್ರಸ್ರರ ಹೋರಾಟಗಾರರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿ, ಸಂತ್ರಸ್ತರ ಬೇಡಿಕೆ ಅನುಷ್ಠಾನದ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಅವರು, ಸಂತ್ರಸ್ತರಿಗೆ ಪರಿಹಾರ ನೀಡುವ ಸಂಬಂಧ ತಾಂತ್ರಿಕ ಸಮಿತಿಯೊಂದನ್ನು ರಚಿಸಿ, ಸಮಿತಿ ನೀಡುವ ವರದಿಯಾಧರಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಕಾರಂಜಾ ಜಲಾಶಯ ನಿರ್ಮಾಣಕ್ಕೆ 1972-73ರಲ್ಲಿ ಭೂಸ್ವಾಧೀನ ವಾಗಿತ್ತು. ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ಎಕರೆಗೆ 3,000 ರೂ.ನಂತೆ 1981-86ರಲ್ಲಿ ಆಗಿನ ಮಾರುಕಟ್ಟೆ ಬೆಲೆ ಆಧರಿಸಿ ಪರಿಹಾರ ನೀಡಲಾಗಿತ್ತು. ಆದರೆ, ಪರಿಹಾರ ಧನದ ಬಗ್ಗೆ ತಕರಾರು ಎತ್ತಿ ಕೋರ್ಟ್ ಮೊರೆ ಹೋದ ಸಂತ್ರಸ್ತರು ಹೆಚ್ಚು ಪರಿಹಾರ ಧನ ಪಡೆದಿದ್ದರು. ನ್ಯಾಯಾಲಯದ ಮೊರೆ ಹೋಗದ ರೈತರು ಹೆಚ್ಚುವರಿ ಪರಿಹಾರಕ್ಕಾಗಿ ಆಗ್ರಹಿಸಿ 20 ಹೋರಾಟ ನಡೆಸುತ್ತಿದ್ದಾರೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಈ ವೇಳೆ ಸಚಿವ ರಹೀಂ ಖಾನ್, ಕೆಕೆಡಿಬಿ ಅಧ್ಯಕ್ಷ ಅಜಯ ಸಿಂಗ್ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News