‘ಗೃಹಲಕ್ಷ್ಮಿ’ ಹಣ ಕೂಡಿಟ್ಟು ಗಿರಣಿ ಯಂತ್ರ ಖರೀದಿಸಿದ ಮಹಿಳೆ : ಶುಭ ಕೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ : ಜಿಲ್ಲೆಯ ಕುಕಡೊಳ್ಳಿ ಗ್ರಾಮದ ಮಹಿಳೆಯೊಬ್ಬರು ಗೃಹಲಕ್ಷ್ಮಿ ಹಣ ಕೂಡಿಟ್ಟು, ಗಿರಣಿ ಯಂತ್ರ ಖರೀದಿಸಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರವಿವಾರ ಗಿರಿಣಿಯನ್ನು ಉದ್ಘಾಟಿಸಿ, ಮಹಿಳೆಯ ನೂತನ ಉದ್ಯಮಕ್ಕೆ ಶುಭ ಕೋರಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ತಾಯವ್ವ ಕ.ಲಕಮೋಜಿ ಎಂಬ ಮಹಿಳೆ ರಾಜ್ಯ ಸರಕಾರದ ‘ಗೃಹಲಕ್ಷ್ಮೀ’ ಯೋಜನೆಯಿಂದ ಭವಿಷ್ಯ ಕಟ್ಟಿಕೊಳ್ಳಲು ಮುಂದಾಗಿದ್ದಾರೆ. ಲಕ್ಷಾಂತರ ಬಡ ಕುಟುಂಬಗಳ ಆರ್ಥಿಕ ಪರಿಸ್ಥಿತಿಯನ್ನು ಗೃಹಲಕ್ಷ್ಮೀ ಯೋಜನೆ ಸುಧಾರಣೆಗೊಳಿಸಿದ್ದು, ಸಾಕಷ್ಟು ಬಡ ಕುಟುಂಬಗಳು ಈ ಯೋಜನೆಯ ಮೂಲಕ ಬದುಕು ಕಟ್ಟಿಕೊಂಡಿವೆ. ಯೋಜನೆಯ ಸಾರ್ಥಕತೆಗೆ ಇದಕ್ಕಿಂತ ಬೇರೆ ಉದಾಹರಣೆ ಬೇಕೆ ಎಂದರು.
ಈ ಸಂದರ್ಭದಲ್ಲಿ ಕುಕಡೊಳ್ಳಿ ಗ್ರಾಮದ ಚನ್ನಬಸಯ್ಯ ಹಿರೇಮಠ್, ಬಸಯ್ಯ ಚಿಕ್ಕಮಠ್, ವೀರನಗೌಡ ಪಾಟೀಲ, ತಾಯಪ್ಪ ಮರಕಟ್ಟಿ, ಪುಂಡಲೀಕ ಬೈರೋಜಿ, ಕಲ್ಲಪ್ಪ ವಡ್ಡಿನ, ಅನ್ನಪೂರ್ಣ ಪಾಟೀಲ ಸೇರಿ ಅನೇಕರು ಉಪಸ್ಥಿತರಿದ್ದರು.