ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಟ್ಟು‌ ಬಿಜೆಪಿಗೆ ಹೋಗಲ್ಲ: ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ

Update: 2024-01-27 06:43 GMT

ಬೆಳಗಾವಿ: ಕಾಂಗ್ರೆಸ್ ತೊರೆದು ಬಿಜೆಪಿಗೆ ಬರುವಂತೆ ಒತ್ತಡ ಇದೆ. ಆದರೆ, ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಟ್ಟು‌ ಬಿಜೆಪಿಗೆ ಹೋಗಲ್ಲ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರು  ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ಅವರು ಮಾಧ್ಯಮ ಪ್ರತಿನಿದಿಗಳೊಂದಿಗೆ ಮಾತನಾಡಿದ ಅವರು, "ನಾನು ಜಗದೀಶ್ ಶೆಟ್ಟರ್ ಒಟ್ಟಿಗೆ ನಿರ್ಧಾರ ಮಾಡಿಕೊಂಡು ಕಾಂಗ್ರೇಸ್ ಗೆ ಪಕ್ಷಕ್ಕೆ ಸೇರ್ಪಡೆ ಆಗಿರೊದಲ್ಲ. ನಾನು ಮೊದಲು ಬಂದೆ. ಟಿಕೆಟ್ ಸಿಗದ ಕಾರಣ ನಂತರ ಶೆಟ್ಟರ್ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಅವರು ಯಾಕೆ ಈಗ ಬಿಜೆಪಿಗೆ ಹೋಗಿದ್ದಾರೆ ಎಂದು ಗೊತ್ತಿಲ್ಲ ಎಂದು ನುಡಿದರು.

ನಾನೂ ಕೂಡ ಶೆಟ್ಟರ್ ರೀತಿಯಲ್ಲೇ ಬಿಜೆಪಿ ಸೇರ್ಪಡೆಗೊಳ್ಳುತ್ತೇನೆಂಬುದು ಸುಳ್ಳು ಸುದ್ದಿ. ಅಥಣಿಯ ಜನರು ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನು ಅವರಿಗೆ ದ್ರೋಹ ಮಾಡುವುದಿಲ್ಲ ಎಂದು ಹೇಳಿದರು.

ಬಿಜೆಪಿಗೆ ಸೇರ್ಪಡೆಯಾಗುವಂತೆ ನನಗೆ ಒತ್ತಡ ಬರುತ್ತಿರುವುದು ನಿಜ. ಲೋಕಸಭೆ ಚುನಾವಣಾ ಹಿನ್ನೆಲೆ ಬಿಜೆಪಿಗೆ ನಮ್ಮ ಅನಿರ್ವಾಯತೆ ಇದೆ. ಹಾಗಾಗಿ ಸಂಪರ್ಕ ಮಾಡುತ್ತಿದ್ದಾರೆ ಎಂದರು.

ಬಿಜೆಪಿಯಲ್ಲಿನ ಹಲವಾರು ಹಿರಿಯ ನಾಯಕರು ಮತ್ತು ಸ್ನೇಹಿತರು ನನ್ನನ್ನು ಪಕ್ಷಕ್ಕೆ ಮರಳುವಂತೆ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ. ಅಲ್ಲದೆ ನನ್ನ ನಿರ್ಗಮನದ ಪರಿಣಾಮ ಏನು ಎಂಬುದು ಬಿಜೆಪಿ ಈಗ ತಿಳಿದಿದೆ. ಹೀಗಾಗಿ ನಾನು ಪಕ್ಷಕ್ಕೆ ಮರಳಬೇಕೆಂದು ಬಯಸುತ್ತಿದ್ದಾರೆ. ಆದರೆ, ನಾನು ಕಾಂಗ್ರೆಸ್ ತೊರೆಯುವುದಿಲ್ಲ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News