ʼಗೃಹಲಕ್ಷ್ಮಿʼ ಯೋಜನೆ ಜಾರಿ ನಿಜಕ್ಕೂ ಸಾರ್ಥಕ : ಲಕ್ಷ್ಮಿ ಹೆಬ್ಬಾಳ್ಕರ್

Update: 2024-12-18 16:27 IST
ʼಗೃಹಲಕ್ಷ್ಮಿʼ ಯೋಜನೆ ಜಾರಿ ನಿಜಕ್ಕೂ ಸಾರ್ಥಕ : ಲಕ್ಷ್ಮಿ ಹೆಬ್ಬಾಳ್ಕರ್
  • whatsapp icon

ಬೆಳಗಾವಿ (ಸುವರ್ಣ ವಿಧಾನಸೌಧ) : ಮನೆಯ ಯಜಮಾನಿಗೆ ಮಾಸಿಕ 2ಸಾವಿರ ರೂ.ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ ಯೋಜನೆ’ ಅನೇಕ ರೂಪದಲ್ಲಿ ಬಡ ಮಹಿಳೆಯರಿಗೆ ಸಹಾಯವಾಗುತ್ತಿದೆ. ಈ ಯೋಜನೆ ಜಾರಿಗೆ ತಂದಿದ್ದಕ್ಕೂ ಸಾರ್ಥಕ ಎನಿಸುತ್ತದೆ’ ಎಂದು ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬಣ್ಣಿಸಿದ್ದಾರೆ.

ಬುಧವಾರ ಗೃಹಲಕ್ಷ್ಮೀ ಯೋಜನೆಯ ಆಯ್ದ ಫಲಾನುಭವಿಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದರು. ಈ ವೇಳೆ ಮಾತನಾಡಿದ ಅವರು, ಗೃಹಲಕ್ಷ್ಮೀಯರ ಜೊತೆಗೆ ತೃತೀಯ ಲಿಂಗಿಯರಿಗೂ ಗೃಹಲಕ್ಷ್ಮೀ ಯೋಜನೆಯ ಹಣ ತಲುಪಿಸುವ ಕೆಲಸ ಆಗುತ್ತಿದೆ. ನಮ್ಮ ಸರಕಾರದ ಐದು ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ತಲುಪಬೇಕೆಂಬುದೇ ನಮ್ಮ ಆಶಯ ಎಂದರು.

ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ, ಎಲ್ಲರಿಗೂ ಯೋಜನೆಗಳನ್ನು ತಲುಪಿಸುವುದೇ ನಮ್ಮ ಉದ್ದೇಶ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರಕಾರದ ಯೋಜನೆಗಳು ತಲುಪವಂತಾಗಬೇಕು. ಗೃಹಲಕ್ಷ್ಮೀ ಯೋಜನೆ ಮೂಲಕ ಪ್ರತಿ ತಿಂಗಳು ಸಿಗುವ 2ಸಾವಿರ ರೂ.ಲಕ್ಷಾಂತರ ಹೆಣ್ಣುಮಕ್ಕಳಿಗೆ ಸಹಾಯವಾಗಿದೆ. ಒಬ್ಬರು ಗೃಹಲಕ್ಷ್ಮಿ ಯೋಜನೆಯ ಹಣದಿಂದ ಗ್ರಂಥಾಲಯ ತೆರೆದರೆ, ಗದಗ ಗಜೇಂದ್ರದಢದ ಅತ್ತೆ-ಸೊಸೆ ಸೇರಿ ತಮ್ಮ ಜಮೀನಿನಲ್ಲಿ ಕೊಳವೆಬಾವಿ ಕೊರೆಸಿದ್ದಾರೆ. ಕಣ್ಣಿನ ಶಸ್ತ್ರಚಿಕಿತ್ಸೆ, ವೈದ್ಯಕೀಯ ಖರ್ಚು ವೆಚ್ಚಗಳು, ಮಕ್ಕಳಿಗೆ ಶಾಲಾ ಶುಲ್ಕ ಪಾವತಿ, ತಮ್ಮ ಮಕ್ಕಳಿಗೆ ದ್ವಿಚಕ್ರ ವಾಹನ ಕೊಡಿಸಿದ್ದು ಸೇರಿದಂತೆ ಹಲವು ರೀತಿಯಲ್ಲಿ ಸದ್ಬಳಕೆ ಆಗುತ್ತಿದೆ ಎಂದು ಅವರು ತಿಳಿಸಿದರು.

ದೃಷ್ಟಿ ತೆಗೆದ ಮಂಗಳಮುಖಿಯರು :

ಮಂಗಳಮುಖಿಯರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ದೃಷ್ಟಿ ತೆಗೆದು ಶುಭ ಹಾರೈಸಿದರು. ‘ನಿಮ್ಮಿಂದ ನಮಗೆ ಪ್ರತಿ ತಿಂಗಳು ಎರಡು ಸಾವಿರ ರೂ.ಸಿಗುತ್ತಿದೆ. ನಿಮಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು ಎಂದು ಸಚಿವೆ ಹೆಬ್ಬಾಳ್ಕರ್ ಅವರಿಗೆ ಕೈಮುಗಿದ ಧನ್ಯವಾದ ಅರ್ಪಿಸಿದರು.

ಹೊಸ ಬೈಕ್ ದರ್ಶನ :

‘ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಬಾಗವ್ವ ಸಣ್ಣಕ್ಕಿ ಗೃಹಲಕ್ಷ್ಮಿ ಯೋಜನೆಯ ಹಣ ಕೂಡಿಟ್ಟು, ತಮ್ಮ ಮಗನಿಗೆ ದ್ವಿಚಕ್ರ ವಾಹನ ಕೊಡಿಸಲು ನೀಡಿರುವ ಹಿನ್ನೆಲೆಯಲ್ಲಿ ಅವರ ಮಗ ಬೆಳಗಾವಿಯ ಸಚಿವರ ನಿವಾಸಕ್ಕೆ ಆಗಮಿಸಿ, ಬೈಕ್ ತೋರಿಸಿ, ಖುಷಿ ಹಂಚಿಕೊಂಡರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News