ತಾಕತ್ತಿದ್ದರೆ ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾದ ಶಾಸಕರನ್ನು ವಜಾ ಮಾಡಿ : ಜಯ ಮೃತ್ಯುಂಜಯ ಸ್ವಾಮೀಜಿ

Update: 2024-12-14 13:14 GMT

ಬೆಳಗಾವಿ: "ನಿಮಗೆ ತಾಕತ್ತಿದ್ದರೆ 2ಎ ಮೀಸಲಾತಿಗೆ ಆಗ್ರಹಿಸಿ ನಾವು ನಡೆಸಿದ ಹೋರಾಟದಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ" ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸಿಎಂಗೆ ಸವಾಲು ಹಾಕಿದರು.

ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ನಮ್ಮ ಹೋರಾಟಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕರಾದ ಬಾಬಾಸಾಹೇಬ ಪಾಟೀಲ್‌, ರಾಜು ಕಾಗೆ, ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಬಂದಿದ್ದರು. ಒಂದು ವೇಳೆ ನಮ್ಮ ಹೋರಾಟ ಸಂವಿಧಾನ ವಿರೋಧಿಯೇ ಆಗಿದ್ದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಆಕ್ರೋಶ ಹೊರಹಾಕಿದರು.

ನಮ್ಮ ಹೋರಾಟವು ಸಂವಿಧಾನ ವಿರೋಧಿ ಆಗಿದ್ದರೆ, ಪ್ರತಿಭಟನೆಗೆ ಯಾಕೆ ಅನುಮತಿ‌ ನೀಡಿದಿರಿ?. ನೀವು ಬಸವಣ್ಣನವರನ್ನು 'ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದ್ದೀರಿ. ಆದರೆ, ನಮ್ಮ ಸಮಾಜವನ್ನು ನಿಂದಿಸುವ ಮೂಲಕ ಬಸವಣ್ಣನವರಿಗೆ ಅವಮಾನಿಸಿದ್ದೀರಿ " ಎಂದು ಹೇಳಿದರು.

‘ಮುಖ್ಯಮಂತ್ರಿ ಹೇಳಿಕೆ ಖಂಡಿಸಿ ಡಿ.16ರಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಮುಗಿಯುವವರೆಗೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ಸತ್ಯಾಗ್ರಹ ಮಾಡುತ್ತೇನೆʼ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News