ಬೆಳಗಾವಿ ಅಧಿವೇಶನ | ಪ್ರಸಕ್ತ ಸಾಲಿನಲ್ಲಿ ಇದುವರೆಗೆ 15 ಸಾವಿರ ಕೋಟಿ ರೂ. ರಾಜಸ್ವ ಸಂಗ್ರಹಣೆ : ಕೃಷ್ಣ ಬೈರೇಗೌಡ

Update: 2024-12-18 17:19 IST
ಬೆಳಗಾವಿ ಅಧಿವೇಶನ | ಪ್ರಸಕ್ತ ಸಾಲಿನಲ್ಲಿ ಇದುವರೆಗೆ 15 ಸಾವಿರ ಕೋಟಿ ರೂ. ರಾಜಸ್ವ  ಸಂಗ್ರಹಣೆ : ಕೃಷ್ಣ ಬೈರೇಗೌಡ
  • whatsapp icon

ಬೆಳಗಾವಿ : ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಇದುವರೆಗೆ 15 ಸಾವಿರ ಕೋಟಿ ರೂ.ಗಳಷ್ಟು ರಾಜಸ್ವ ಸಂಗ್ರಹಣೆ ಆಗಿದ್ದು, ಈ ಬಾರಿ ಕಳೆದ ಸಾಲಿಗಿಂತ ಹೆಚ್ಚು ರಾಜಸ್ವ ಸಂಗ್ರಹಣೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಬುಧವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಶಶೀಲ್ ನಮೋಶಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸಕ್ತ ಸಾಲಿನಲ್ಲಿ ರಾಜಸ್ವ ಸಂಗ್ರಹಣೆಯಲ್ಲಿ ಕಳೆದ ಸಾಲಿಗಿಂತ ಶೇ.20ರಷ್ಟು ಹೆಚ್ಚು ಸಂಗ್ರಹದ ಗುರಿ ಇಟ್ಟುಕೊಳ್ಳಲಾಗಿದೆ ಎಂದರು.

ರಾಜ್ಯದಲ್ಲಿ ಭೌತಿಕ ಖಾತೆ ಬಳಸಿ ನೋಂದಣಿ ಮಾಡುತ್ತಿದ್ದ ಸಂದರ್ಭದಲ್ಲಿ ಸುಳ್ಳು ಗುರುತಿನ ಚೀಟಿ ಸೃಷ್ಟಿಸಿಕೊಂಡು, ಸುಳ್ಳು PI ಸಂಖ್ಯೆ ಸೃಷ್ಟಿಸಿ ಸರಕಾರಿ ಆಸ್ತಿ, ಅಮಾಯಕರ ಆಸ್ತಿಗಳನ್ನು ಬೇರೊಬ್ಬರ ಹೆಸರಿಗೆ ನೋಂದಣಿಯಾಗುತ್ತಿದ್ದ ವಂಚನೆ ಪ್ರಕರಣಗಳನ್ನು, ನೋಂದಣಿ ಮತ್ತು ಮುದ್ರಾಂಕ ಶುಲ್ಕ ವಂಚನೆಯನ್ನು ಹಾಗೂ ಕಾನೂನುಬದ್ಧವಲ್ಲದ ನೋಂದಣಿಗಳನ್ನು ತಡೆಗಟ್ಟಲಾಗಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ಇ-ಖಾತಾ ಸಂಯೋಜನೆಯ ನಂತರ ಕಾನೂನು ಬಾಹಿರ ಮತ್ತು ಬೊಟ್ಟಿ ದಾಖಲೆಗಳನ್ನು ಸೃಷ್ಟಿಸಿಕೊಂಡು ನೋಂದಣಿ ಮಾಡಿಸಿಕೊಳ್ಳುತ್ತಿದ್ದ ದಸ್ತಾವೇಜುಗಳ ಸಂಖ್ಯೆ ಕಡಿಮೆಯಾಗಿದ್ದು, ಕಾನೂನು ಬದ್ದವಾಗಿ ನೈಜವಾದ ಆಸ್ತಿ ನೋಂದಣಿಯಿಂದ ಸರ್ಕಾರಕ್ಕೆ ಯಾವುದೇ ಆದಾಯ ನಷ್ಟ ಉಂಟಾಗಿರುವುದಿಲ್ಲ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News