ಬೆಳಗಾವಿ ಅಧಿವೇಶನ | ಅಭಿಯಾನ ಮಾದರಿಯಲ್ಲಿ ಮುಜರಾಯಿ ಆಸ್ತಿಗಳ ಸಂರಕ್ಷಣೆ : ಕೃಷ್ಣ ಬೈರೇಗೌಡ

Update: 2024-12-18 12:48 GMT
ಬೆಳಗಾವಿ ಅಧಿವೇಶನ | ಅಭಿಯಾನ ಮಾದರಿಯಲ್ಲಿ ಮುಜರಾಯಿ ಆಸ್ತಿಗಳ ಸಂರಕ್ಷಣೆ : ಕೃಷ್ಣ ಬೈರೇಗೌಡ
  • whatsapp icon

ಬೆಳಗಾವಿ : ರಾಜ್ಯದಲ್ಲಿ ಮುಜರಾಯಿ ಆಸ್ತಿಗಳ ಸಂರಕ್ಷಣೆಯನ್ನು ಅಭಿಯಾನ ಮಾದರಿಯಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಬುಧವಾರ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ವರ್ಷ ರಾಜ್ಯದಲ್ಲಿ 5022 ಮುಜರಾಯಿ ಆಸ್ತಿಗಳನ್ನು ಮುಜರಾಯಿ ಇಲಾಖೆಗೆ ಖಾತೆ ಮಾಡಿಕೊಡುವ ಮೂಲಕ ಸಂರಕ್ಷಣೆ ಮಾಡಿದ್ದು, ನಮ್ಮ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದ ಮುಜರಾಯಿ ಆಸ್ತಿಗಳ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ ಎಂದರು.

ಶ್ರೀರಂಗಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಾಲಯಕ್ಕೆ ದಾನವಾಗಿ ನೀಡಿರುವ 1,198 ಎಕರೆ ಜಾಗದಲ್ಲಿ ಒತ್ತುವರಿಯಾಗಿರುವ ಜಾಗದ ವಿಷಯದ ಕುರಿತಂತೆ ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಒತ್ತುವರಿ ಜಾಗವನ್ನು ತೆರೆವುಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News