ನ್ಯಾಯದಾನ ವ್ಯವಸ್ಥೆಯಲ್ಲಿನ ವಿಳಂಬ ತಡೆಗೆ ಕ್ರಮ : ಸಚಿವ ಎಚ್.ಕೆ.ಪಾಟೀಲ್‌

Update: 2024-12-12 11:35 GMT

ಎಚ್.ಕೆ.ಪಾಟೀಲ್ 

ಬೆಳಗಾವಿ : ರಾಜ್ಯದ ನ್ಯಾಯಾಲಯಗಳಲ್ಲಿರುವ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಸರಕಾರ ಗಂಭೀರವಾಗಿ ಪರಿಗಣಿಸಿದ್ದು ಹಾಗೂ ನ್ಯಾಯದಾನ ವ್ಯವಸ್ಥೆಯಲ್ಲಿನ ವಿಳಂಬವನ್ನು ತಡೆಗಟ್ಟುವಲ್ಲಿ ಸರಕಾರ ಅನೇಕ ಕ್ರಮ ಕೈಗೊಂಡಿದೆ ಎಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹೇಳಿದರು.

ಪರಿಷತ್‍ನಲ್ಲಿ ಸದಸ್ಯ ಭಾರತಿಶೆಟ್ಟಿ ಅವರ ಪರವಾಗಿ ಸದಸ್ಯ ರವಿಕುಮಾರ್‌ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ನ್ಯಾಯಾಲಯದ ಪ್ರಕರಣಗಳಲ್ಲಿ ಆಡಳಿತ ಇಲಾಖೆಗಳಿಂದ ಸಕಾಲದಲ್ಲಿ ಆಕ್ಷೇಪಣಾ ಹೇಳಿಕೆಗಳನ್ನು ದಾಖಲಿಸಲು ಅನುವಾಗುವಂತೆ ಮತ್ತು ನ್ಯಾಯಾಲಯ ಹೇಳಿಕೆಗಳನ್ನು ದಾಖಲಿಸಲು ಅನುವಾಗುವಂತೆ ಮತ್ತು ನ್ಯಾಯಾಲಯ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಕರ್ನಾಟಕ ಸರಕಾರಿ ವ್ಯಾಜ್ಯ ನಿರ್ವಹಣಾ ಅಧಿನಿಯಮ, 2023 ಜಾರಿಗೆ ಬಂದಿರುತ್ತದೆ ಹಾಗೂ ನಿಯಮಗಳನ್ನು ರಚಿಸಿದ್ದು, ಅವುಗಳನ್ನು ಸದ್ಯದಲ್ಲೇ ಜಾರಿಗೆ ತರಲಾಗುತ್ತದೆ. ಸಿವಿಲ್ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2023 ದಿನಾಂಕ: 04-03-2024 ರಿಂದ ಜಾರಿಗೆ ಬಂದಿರುತ್ತದೆ ಎಂದು ಅವರು ತಿಳಿಸಿದರು.

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಸರಕಾರದ ಪರ 2021ನೇ ಸಾಲಿನಲ್ಲಿ 3216, 2022ನೇ ಸಾಲಿನಲ್ಲಿ 2277, 2023ನೇ ಸಾಲಿನಲ್ಲಿ 2213 ಹಾಗೂ ಸರಕಾರದ ವಿರುದ್ಧವಾಗಿ 2021ನೇ ಸಾಲಿನಲ್ಲಿ 20492, 2022ನೇ ಸಾಲಿನಲ್ಲಿ 16853, 2023ನೇ ಸಾಲಿನಲ್ಲಿ 14994 ಪ್ರಕರಣಗಳು ದಾಖಲಾಗಿವೆ ಎಂದು ಅವರು ಸದನಕ್ಕೆ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News