ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಬಿಎಂಪಿ ಮಾದರಿಯಲ್ಲಿ ಇ-ಆಸ್ತಿ ನೀಡಿಕೆ : ಸಚಿವ ರಹೀಂ ಖಾನ್

Update: 2024-12-17 12:53 GMT

 ಸಚಿವ ರಹೀಂ ಖಾನ್

ಬೆಳಗಾವಿ : ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಬಿಎಂಪಿ ಮಾದರಿಯಲ್ಲಿ ಎ-ಖಾತಾ ಮತ್ತು ಬಿ-ಖಾತಾ ಎಂದು ಇ-ಆಸ್ತಿ ನೀಡುವ ಕಾರ್ಯವನ್ನು ಜಾರಿಗೊಳಿಸಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದ್ದಾರೆ.

ಮಂಗಳವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಚಿದಾನಂದ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಬಿಎಂಪಿ ಕಾಯ್ದೆ, 2020ರ ಕಲಂ 144(6) ಮತ್ತು (21)ರ ಅಂಶವನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳು/ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲು ಚಿಂತಿಸಲಾಗಿದೆ ಎಂದರು.

ಬಿಬಿಎಂಪಿ ಕಾಯ್ದೆ, 2020ರ ಕಲಂ 144(6) ಮತ್ತು (21)ರ ಅಂಶವನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳು/ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ಹಾಗೂ ಕರ್ನಾಟಕ ಪುರಸಭೆಗಳ ಅಧಿನಿಯಮ 1964ರಲ್ಲಿ ಅಳವಡಿಸಿಕೊಳ್ಳುವ ಸಂಬಂಧ ರಾಜ್ಯಪತ್ರದಲ್ಲಿ ರಾಜ್ಯದ ಇತರ ಮಹಾನಗರ ಪಾಲಿಕೆಗಳು / ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲು ಕರ್ನಾಟಕ ಪುರಸಭೆಗಳ ಅಧಿನಿಯಮ 1964 ಮತ್ತು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ಕ್ಕೆ ತಿದ್ದುಪಡಿ ತರಲಾಗಿದೆ. ಅದರಂತೆ, ನಿಯಮಗಳಲ್ಲಿ ತಿದ್ದುಪಡಿ ತರಲು ಕ್ರಮ ವಹಿಸಲಾಗುತ್ತಿದೆ ಎಂದು ರಹೀಂ ಖಾನ್ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News