ಬೆಳಗಾವಿ | ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಮಸಿ ಬಳಿದ ದುಷ್ಕರ್ಮಿಗಳು
ಅಂಬೇಡ್ಕರ್ ಭಾವಚಿತ್ರಕ್ಕೆ ಮಸಿ ಬಳಿದ ದುಷ್ಕರ್ಮಿಗಳು
ಬೆಳಗಾವಿ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಸಿ ಬಳಿದು ಅವಮಾನ ಮಾಡಿ ವಿಕೃತಿ ಮೆರೆದ ಘಟನೆ ಕಿತ್ತೂರು ತಾಲೂಕಿನ ಎಂ.ಕೆ ಹುಬ್ಬಳ್ಳಿ ಪಟ್ಟಣದಲ್ಲಿ ನಡೆದಿದೆ.
ರವಿವಾರ ತಡರಾತ್ರಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ದುಷ್ಕರ್ಮಿಗಳು ಮಸಿ ಬಳಿದ್ದಾರೆ. ಬೆಳಗ್ಗೆ ಸ್ಥಳೀಯ ನಿವಾಸಿಗಳು ಭಾವಚಿತ್ರ ನೋಡಿದಾಗ ಘಟನ ಬೆಳಕಿಗೆ ಬಂದಿದೆ.
ಘಟನೆ ಹಿನ್ನಲೆಯಲ್ಲಿ ಪೊಲೀಸರು ಮುಂಜಾಗೃತಾ ಕ್ರಮ ಕೈಗೊಂಡಿದ್ದು, ಸ್ಥಳಕ್ಕೆ ಕಿತ್ತೂರು ಠಾಣೆಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಂಬೇಡ್ಕರ್ ಭವನಕ್ಕೆಂದು ಮೀಸಲಿಟ್ಟಿದ್ದ ಜಾಗದಲ್ಲಿ ಸ್ಥಳೀಯರು ಭಾವಚಿತ್ರ ಪ್ರತಿಷ್ಠಾಪಿಸಿದ್ದರು. ಈ ಭಾವಚಿತ್ರಕ್ಕೆ ರಾತೋರಾತ್ರಿ ಕಿಡಿಗೇಡಿಗಳು ಮಸಿ ಬಳಿದಿದ್ದಾರೆ.
ಎಲ್ಲ ಸಮುದಾಯದ ಜನ ಸೇರಿಕೊಂಡು ಶಾಂತಿಯುತವಾಗಿ ಚರ್ಚೆ ನಡೆಸಿದ್ದು, ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.