ಅಂಗನವಾಡಿ ಕಾರ್ಯಕತೆರ್ಯರೊಂದಿಗೆ ಚುನಾವಣೆಗೆ ಸಂಬಂಧಪಟ್ಟಂತೆ ನಾನು ಯಾವುದೇ ಸಭೆ ನಡೆಸಿಲ್ಲ : ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ಅಂಗನವಾಡಿ ಕಾರ್ಯಕತೆರ್ಯರೊಂದಿಗೆ ಚುನಾವಣೆಗೆ ಸಂಬಂಧಪಟ್ಟಂತೆ ನಾನು ಯಾವುದೇ ಸಭೆ ನಡೆಸಿಲ್ಲ. ಮನವಿ ಸಲ್ಲಿಕೆ ಸಂಬಂಧ ಕೆಲವರು ನನ್ನ ಬಳಿ ಬಂದಿದ್ದರು ಅಷ್ಟೇ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆ. ಇತ್ತೀಚೆಗೆ ಪಲ್ಸ್ ಪೊಲೀಯೋ, ಸರಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸಮೀಕ್ಷೆ ಮಾಡಿದ್ದರು. ಈಗ ಬಿಎಲ್‍ಒ ಆಗಿ ಕೆಲಸ ಮಾಡುತ್ತಿದ್ದು, ಇದರಿಂದ ತೊಂದರೆ ಆಗುತ್ತಿದೆ ಎಂದು ನನಗೆ ಹೇಳಲು ಬಂದಿದ್ದಾರೆ. ಆದರೆ, ನಾನೇ ಅವರಿಗೆ ತಿಳಿ ಹೇಳಿ ಕೆಲಸ ಮಾಡಲು ಸೂಚಿಸಿದೆ ಎಂದರು.
ಚುನಾವಣೆ ವೇಳೆ ದೂರು ನೀಡುವುದು ಸರ್ವೆ ಸಾಮಾನ್ಯ. ದೂರು ನೀಡಲಿ.ಆದರೆ, ಓರ್ವ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ನಾನು ನಿಯಮ ಉಲ್ಲಂಘಿಸಿಲ್ಲ. ನಾನು ದೇಶದ ಕಾನೂನಿಗೆ ಗೌರವ ಕೊಡುತ್ತೇನೆ. ನನಗೆ ಇದು ಐದನೆ ಚುನಾವಣೆ. ನನಗೆ ಚುನಾವಣೆ ಎದುರಿಸುವುದು ಹೇಗೆ ಎಂಬುದು ಗೊತ್ತು ಎಂದು ಸಚಿವರು ಹೇಳಿದರು.