ಬೆಳಗಾವಿ ಅಧಿವೇಶನ | ಸ್ಪೀಕರ್ ಕಚೇರಿಗೆ ನುಗ್ಗಿ ಬಿಜೆಪಿ ಶಾಸಕರಿಂದ ಗದ್ದಲ
Update: 2024-12-12 11:09 GMT
ಬೆಳಗಾವಿ : ಪಂಚಮಸಾಲಿ ಹೋರಾಟಗಾರ ಮೇಲೆ ಲಾಠಿ ಚಾರ್ಜ್ ಪ್ರಕರಣ ಸಂಬಂಧ ಚರ್ಚೆಗೆ ಅವಕಾಶ ನೀಡದೆ ಕಲಾಪವನ್ನು ಮುಂದೂಡಿದಕ್ಕೆ ಕೆರಳಿದ ಬಿಜೆಪಿ ಶಾಸಕರು ಸುವರ್ಣ ಸೌಧದ ಸ್ಪೀಕರ್ ಯು.ಟಿ. ಖಾದರ್ ಅವರ ಕಚೇರಿಗೆ ಮುತ್ತಿಗೆ ಹಾಕಿ, ಏರು ಧ್ವನಿಯಲ್ಲಿ ಗಲಾಟೆ ಮಾಡಿದ್ದಾರೆ.
ಶಾಸಕ ಸುನೀಲ್ ಕುಮಾರ್, ವಿಪಕ್ಷ ನಾಯಕ ಅಶೋಕ್, ವಿಜಯೇಂದ್ರ, ಅರವಿಂದ್ ಬೆಲ್ಲದ್, ಸಿದ್ದು ಸವದಿ, ಸುರೇಶ್ ಗೌಡ ಸೇರಿದಂತೆ ಬಿಜೆಪಿ ಶಾಸಕರು ಸ್ಪೀಕರ್ ಕಚೇರಿಯಲ್ಲಿ ಖಾದರ್ ಅವರ ಜೊತೆ ವಾಗ್ದಾದ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿ ಶಾಸಕರು ಸ್ಪೀಕರ್ ಜೊತೆ ಜಗಳದ ವಿಷಯ ತಿಳಿಯುತ್ತಿದ್ದಂತೆಯೇ ಸಚಿವರು ಮತ್ತು ಕಾಂಗ್ರೆಸ್ ಶಾಸಕರು ಸ್ಥಳಕ್ಕೆ ದೌಡಾಯಿಸಿ ಸ್ಪೀಕರ್ ಯು.ಟಿ.ಖಾದರ್ ಬೆಂಬಲಕ್ಕೆ ನಿಂತರು. ಹೀಗಾಗಿ ಎರಡೂ ಕಡೆಯಿಂದಲೂ ಸ್ಪೀಕರ್ ಕಚೇರಿಯಲ್ಲಿ ಆರೋಪ-ಪ್ರತ್ಯಾರೋಪ ನಡೆದಿದೆ.