ಬ್ಯಾನರ್‌ನಲ್ಲಿ ಭಾರತದ ಭೂಪಟ ವಿರೂಪ: ಪ್ರಮಾದವನ್ನು ಸರಿಪಡಿಸಲಾಗಿದೆ ಎಂದ ಡಿ.ಕೆ.ಶಿವಕುಮಾರ್

Update: 2024-12-26 14:50 GMT

ಬೆಳಗಾವಿ : ಬೆಳಗಾವಿ ನಗರದಲ್ಲಿ ಹಾಕಿರುವ ಬ್ಯಾನರ್‌ಗಳಲ್ಲಿ ಯಾರದ್ದೋ ನಿರ್ಲಕ್ಷ್ಯದಿಂದ ಭಾರತದ ನಕ್ಷೆಯಲ್ಲಿ ಪಿಒಕೆ ಭೂಭಾಗ ಕಾಣೆಯಾಗಿದೆ. ಇಷ್ಟಕ್ಕೆ ಪ್ರತಿಪಕ್ಷಗಳು ದೊಡ್ಡದಾಗಿ ಬಾಯಿ ಬಡಿದುಕೊಳ್ಳುತ್ತಿವೆ. ಆಗಿರುವ ಪ್ರಮಾದವನ್ನು ಈಗ ಸರಿಪಡಿಸಲಾಗಿದ್ದು, ವಿಪಕ್ಷ ನಾಯಕರು ಈಗಲಾದರೂ ಬಾಯಿಗೆ ಬೀಗ ಹಾಕಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಗುರುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಬಗ್ಗೆ ಕಾಂಗ್ರೆಸ್‍ನ ನಿಲುವಿನ ಬಗ್ಗೆ ನಾವು ಪ್ರತ್ಯೇಕವಾಗಿ ಹೇಳಬೇಕಿಲ್ಲ. ಪಿಒಕೆ ಸೇರಿದಂತೆ ಸಂಪೂರ್ಣ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆಂದು ಈ ಹಿಂದಿನ ಕಾಂಗ್ರೆಸ್ ಸರಕಾರಗಳು ಜಾಗತಿಕ ವೇದಿಕೆಯಲ್ಲಿ ಗಟ್ಟಿಯಾಗಿ ಹೇಳಿದ ಇತಿಹಾಸವಿದೆ. ಕಾಂಗ್ರೆಸ್ ಸರಕಾರಗಳು ವಿವಿಧ ಕಾಲಘಟ್ಟದಲ್ಲಿ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನದ ಅಸಲಿ ಮುಖವಾಡವನ್ನು ಕಳಚಿರುವ ಸತ್ಯ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಗೊತ್ತಿಲ್ಲ ಎಂದು ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News