ಎಸ್.ಎಂ.ಕೃಷ್ಣ ನಿಧನ ಹಿನ್ನೆಲೆ: ಕಾಂಗ್ರೆಸ್ ಶಾಸಕಾಂಗದ ಸಭೆ, ಔತಣಕೂಟ ಮುಂದೂಡಿಕೆ

Update: 2024-12-10 04:06 GMT

 ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ | PTI

ಬೆಳಗಾವಿ, ಡಿ.10: ಬೆಳಗಾವಿಯ ಶೂನ್ಯ ರೆಸಾರ್ಟ್ ನಲ್ಲಿ ಇಂದು(ಡಿ.10) ಸಂಜೆ ಏರ್ಪಡಿಸಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಾಗೂ ಔತಣಕೂಟವನ್ನು ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಮಾಜಿ ಸಿಎಂ ಎಸ್.ಎಂ.ಕೃಷ್ಣರ ನಿಧನದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಶಿವಕುಮಾರ್ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News