ಮಾ.31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
Update: 2025-03-23 13:17 IST

ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ‘ಮಾ.31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆʼ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 2 ಸಾವಿರ ರೂ. ಹೆಚ್ಚಿಸಿದ್ದೆವು. ನಂತರ ಯಾವುದೇ ಸರ್ಕಾರಗಳೂ ಹೆಚ್ಚಿಸಲಿಲ್ಲ.
ಈ ಬಜೆಟ್ ನಲ್ಲಿ ಕಾರ್ಯಕರ್ತೆಯರ ಗೌರವಧನವನ್ನು 750 ರೂ. ಹಾಗೂ ಸಹಾಯಕಿಯರ ಗೌರವಧನವನ್ನು 500 ರೂ. ಹೆಚ್ಚಿಸಿ ಘೋಷಿಸಿದ್ದೇವೆ. ಅದನ್ನು ಜಾರಿಗೆ ತರುತ್ತೇವೆ ಎಂದರು.