ಬೆಳಗಾವಿ | ಸುವರ್ಣ ಸೌಧದ ಮುಂಭಾಗದಲ್ಲಿ ʼಮಕ್ಕಳ ವಿಜ್ಞಾನ ಉದ್ಯಾನವನʼ : ಕಾಮಗಾರಿ ಪರಿಶೀಲಿಸಿದ ಸ್ಪೀಕರ್‌ ಯು.ಟಿ.ಖಾದರ್

Update: 2024-12-08 12:03 GMT

ಬೆಳಗಾವಿ : ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ಮಕ್ಕಳ ವಿಜ್ಞಾನ ಉದ್ಯಾನವನ ನಿರ್ಮಾಣವಾಗುತ್ತಿದ್ದು, ಇಂದು(ಡಿ.8) ವಿಧಾನಸಭೆಯ ಸ್ಪೀಕರ್‌ ಯು.ಟಿ.ಖಾದರ್ ಅವರು ಭೇಟಿ ನೀಡಿ, ಕಾಮಗಾರಿ ಪರಿಶೀಲನೆ ನಡೆಸಿದರು.

ಸುವರ್ಣ ಸೌಧದ ಮುಂಭಾಗದಲ್ಲಿರುವ ಸುಮಾರು ಎರಡು ಎಕರೆ ಜಮೀನಿನಲ್ಲಿ ಈ ಉದ್ಯಾನವನ ನಿರ್ಮಾಣವಾಗುತ್ತಿದ್ದು, ನರೇಗಾ ಯೋಜನೆಯಲ್ಲಿ ನೋಂದಣಿಗೊಂಡ ಇನ್ನೂರಕ್ಕೂ ಅಧಿಕ ಮಹಿಳೆಯರು ಇಲ್ಲಿ ಕೆಲಸ ಮಾಡುತ್ತಿದ್ದಾರೆ.

ಬೆಳಗಾವಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಉಸ್ತುವಾರಿಯಲ್ಲಿ ಕಾಮಗಾರಿ ನಡೆಯುತ್ತಿದ್ದು, ಇದೇ ಬರುವ 11ನೇ ತಾರೀಕಿಗೆ ಉದ್ಘಾಟನೆಗೊಳ್ಳಲಿದೆ ಎಂದು ಸ್ಪೀಕರ್‌ ಯು.ಟಿ.ಖಾದರ್ ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಮುಂತಾದವರು ಉಪಸ್ಥಿತರಿದ್ದರು.

 

 

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News