ಕೆರೆಗಳ ಏರಿಗಳ ಸಂರಕ್ಷಣೆಗೆ ವಿವಿಧ ಕ್ರಮ: ಎನ್.ಎಸ್.ಭೋಸರಾಜು

Update: 2024-12-12 15:50 GMT

ಎನ್.ಎಸ್.ಭೋಸರಾಜು

ಬೆಳಗಾವಿ (ಸುವರ್ಣ ವಿಧಾನಸೌಧ) : ಕೆರೆಗಳ ಏರಿಗಳ ಸಂರಕ್ಷಣೆಗಾಗಿ ಸರಕಾರವು ಅನೇಕ ಕ್ರಮಗಳನ್ನು ಕೈಗೊಂಡಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ.

ಗುರುವಾರ ವಿಧಾನಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಅಬ್ದುಲ್ ಜಬ್ಬಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿ ವರ್ಷದಂತೆ ಈ ವರ್ಷವು ಮುಂಗಾರು ಪ್ರಾರಂಭವಾಗುವ ಮುಂಚೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಕೆರೆಗಳ ಪರಿವೀಕ್ಷಣೆ ಕೈಗೊಂಡು, ಕೆರೆಗಳ ಏರಿ, ಕೋಡಿ, ತೂಬು ಸೇರಿದಂತೆ ಇತ್ಯಾದಿಗಳನ್ನು ಸುಸ್ಥಿತಿಯಲ್ಲಿರುವ ಬಗ್ಗೆ ಖಾತರಿಪಡಿಸಿಕೊಂಡು ಮುನ್ನೆಚ್ಚರಿಕೆಗಳನ್ನು ಕೈಗೊಂಡಿದ್ದಾರೆ ಎಂದರು.

ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ 3,778 ಕೆರೆಗಳಿದ್ದು, ಅತೀ ಮಳೆಯಿಂದ ಕೆರೆಗಳ ಏರಿ ಹಾನಿಯಾದ ಸಂದರ್ಭದಲ್ಲಿ ತುರ್ತು ಸಂರಕ್ಷಣೆಗೆ ಕ್ರಮ ಜರುಗಿಸಲಾಗಿದೆ ಎಂದು ಎನ್.ಎಸ್.ಭೋಸರಾಜು ವಿವರಿಸಿದರು.

2023-24ನೇ ಸಾಲಿನಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ 210 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು, 29.12 ಕೋಟಿ ರೂ. ವೆಚ್ಚ ಮಾಡಲಾಗಿದೆ. 2022-23 ರಲ್ಲಿ 638 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು, 156 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಎನ್.ಎಸ್.ಭೋಸರಾಜು ತಿಳಿಸಿದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News