ಯುವನಿಧಿ ಯೋಜನೆ | 1,45,978 ಮಂದಿಗೆ ನಿರುದ್ಯೋಗ ಭತ್ಯೆ : ಡಾ.ಶರಣಪ್ರಕಾಶ್ ಪಾಟೀಲ್
Update: 2024-12-09 13:30 GMT
ಬೆಳಗಾವಿ(ಸುವರ್ಣ ವಿಧಾನಸೌಧ) : ರಾಜ್ಯದಲ್ಲಿ 1,81,699 ಪದವೀಧರರು ಯುವನಿಧಿ ಯೋಜನೆ ಅಡಿ ನೋಂದಣಿ ಮಾಡಿಕೊಂಡಿದ್ದು, ಅದರಲ್ಲಿ 1,45,978 ಪದವೀಧರರಿಗೆ ನೇರ ನಗದು ವರ್ಗಾವಣೆ ಮೂಲಕ ನಿರುದ್ಯೋಗ ಭತ್ಯೆ ಪಾವತಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಸೋಮವಾರ ಪರಿಷತ್‍ನಲ್ಲಿ ಬಿಜೆಪಿ ಸದಸ್ಯ ಕೆ.ಎಸ್.ನವೀನ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಯುವನಿಧಿ ಯೋಜನೆ ಅಡಿ ನೋಂದಾಯಿಸಿದ ಅರ್ಹ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಈ ಯೋಜನೆ ತಲುಪುತ್ತಿದೆ ಎಂದರು. ಯುವನಿಧಿ ಯೋಜನೆ ಅಡಿಯಲ್ಲಿ ನೋಂದಾಯಿಸಿದ ಅಭ್ಯರ್ಥಿಗಳು ಪ್ರತಿ ತಿಂಗಳು ಡಿಕ್ಲರೇಶನ್ ನೀಡುವುದು ಕಡ್ಡಾಯವಾಗಿದ್ದು, ಇದನ್ನು ನೀಡದೆ ಇದ್ದಲ್ಲಿ ಭತ್ಯೆ ಸ್ಥಗಿತಗೊಳ್ಳಲಿದೆ ಎಂದು ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು.