ಬಳ್ಳಾರಿ | ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಯುವ ಮುಖಂಡನ ಬಂಧನ
Update: 2025-03-20 13:15 IST

ದೇವು ನಾಯಕ
ಬಳ್ಳಾರಿ : ಅಪ್ರಾಪ್ತೆ ಮೇಲೆ ಬಿಜೆಪಿ ಯುವ ಮುಖಂಡನೊಬ್ಬ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಬಳ್ಳಾರಿಯ ಸಿರಗುಪ್ಪ ತಾಲೂಕಿನ ಬಿಜೆಪಿ ಯುವ ಮುಖಂಡ ದೇವು ನಾಯಕ ಎಂಬಾತ ಓರ್ವ ಮಹಿಳೆ ಸಹಾಯದಿಂದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಸದ್ಯ ಪೊಲೀಸರು ದೇವು ನಾಯಕನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಳ್ಳಾರಿ ಜಿಲ್ಲೆಯ ಮುಂಬರುವ ಸ್ಥಳೀಯ ಚುನಾವಣೆಯಲ್ಲಿ ದೇವು ನಾಯಕ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದ ಎನ್ನಲಾಗಿದೆ.ಜೊತೆಗೆ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ದೇವು ನಾಯಕ ಬಿಜೆಪಿಯ ಹಲವಾರು ಪ್ರಮುಖ ನಾಯಕರೊಂದಿಗೆ ಇರುವ ಛಾಯಾಚಿತ್ರಗಳಿವೆ.
ಘಟನೆಯ ಬೆನ್ನಲ್ಲಿಯೇ ಸಂತ್ರಸ್ತ ಬಾಲಕಿಯ ಕುಟುಂಬಸ್ಥರು ಸಿರಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.