ಬಿಮ್ಸ್‌ನಲ್ಲಿ ಬಾಣಂತಿ ಮೃತ್ಯು ಪ್ರಕರಣ | ತನಿಖೆ ನಡೆಸಿ ವರದಿ ನೀಡಲು ಜಿಲ್ಲಾಧಿಕಾರಿಗೆ ಸಚಿವ ಝಮೀರ್‌ ಅಹ್ಮದ್‌ ಸೂಚನೆ

Update: 2024-11-28 06:37 GMT

ಸಚಿವ ಝಮೀರ್‌ ಅಹ್ಮದ್

ಬೆಂಗಳೂರು : ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಕೂಡ್ಲಿಗಿ ಮೂಲದ ಬಾಣಂತಿ ಸಾವು ಪ್ರಕರಣ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಝಮೀರ್‌ ಅಹ್ಮದ್ ಖಾನ್ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ ಅವರ ಬಳಿ ಮಾಹಿತಿ ಪಡೆದ ಸಚಿವರು‌, ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಮುನ್ನಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದರು.

ʼಈ ಹಿಂದೆ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ್ದ ನಾಲ್ಕು ಬಾಣಂತಿಯರ ಮೃತ್ಯು ಪ್ರಕರಣಕ್ಕೂ ಈ ಘಟನೆಗೆ ಸಂಬಂಧ ಇಲ್ಲ. ಕೂಡ್ಲಿಗಿ ಗುಡೇಕೋಟೆ ಪ್ರಾಥಮಿಕ ಅರೋಗ್ಯ ಕೇಂದ್ರದಿಂದ ಮಹಾಲಕ್ಷ್ಮಿ ಎಂಬುವರು ವಿಮ್ಸ್ ಗೆ ಇದೇ 24 ರಂದು ದಾಖಲಾಗಿ 26 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಈ ಬಗ್ಗೆ ಅರೋಗ್ಯ ಅಧಿಕಾರಿಗಳಿಂದ ವರದಿ ಪಡೆಯಲಾಗಿದೆ. ಮುಂದೆ ಇಂತಹ ಘಟನೆ ನಡೆಯದಂತೆ ಮುನ್ನಚ್ಚರಿಕೆ ವಹಿಸಲಾಗುವುದುʼ ಎಂದು ಜಿಲ್ಲಾಧಿಕಾರಿಗಳು ಸಚಿವರಿಗೆ ತಿಳಿಸಿದರು.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News