ಈ.ತುಕಾರಾಮ್ 1,200 ಕೋಟಿ ರೂ.ಅನುದಾನವನ್ನು ಸಂಡೂರು ಜನತೆಗೆ ತಂದಿದ್ದಾರೆ : ಸಿದ್ದರಾಮಯ್ಯ

Update: 2024-10-14 13:40 GMT

ಸಂಡೂರು : ಈ.ತುಕಾರಾಮ್ ಈ ಬಾರಿ ಶಾಸಕರಾದ ಬಳಿಕ 1,200 ಕೋಟಿ ರೂ. ಅನುದಾನವನ್ನು ಸಂಡೂರು ಕ್ಷೇತ್ರದ ಜನತೆಗಾಗಿ ತಂದಿದ್ದಾರೆ. ಅಭಿವೃದ್ಧಿ ಎಂದರೆ ತುಕಾರಾಮ್. ತುಕಾರಾಮ್ ಎಂದರೆ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

ಸೋಮವಾರ ಸಂಡೂರು ತಾಲೂಕಿನ ಸಾಧನಾ ಸಮಾವೇಶವನ್ನು ಉದ್ಘಾಟಿಸಿ, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸುವುದರ ಜೊತೆಗೆ ಪೂರ್ಣಗೊಂಡಿರುವ ಸುಮಾರು 400 ಕೋಟಿ ರೂ.ಗೂ ಅಧಿಕ ಮೊತ್ತದ ಯೋಜನೆಗಳನ್ನು ಸಂಡೂರು ಜನತೆಗೆ ಅರ್ಪಿಸಿ ಅವರು ಮಾತನಾಡಿದರು.

ಸಂಡೂರಿನಲ್ಲಿ 12 ಸಾವಿರ ಮನೆಗಳನ್ನು ಕಟ್ಟಿ ಕ್ಷೇತ್ರದ ಜನರಿಗೆ ಹಂಚಿಕೆ ಮಾಡಿರುವುದರ ಶ್ರೇಯಸ್ಸು ಸಂತೋμï ಲಾಡ್ ಹಾಗೂ ಈ.ತುಕಾರಾಮ್ ಜೋಡಿಗೆ ಸಲ್ಲಬೇಕು. ನನ್ನ ವಿರುದ್ಧ ಷಡ್ಯಂತ್ರ, ಪಿತೂರಿ ನಡೆಸುತ್ತಿರುವ ಬಿಜೆಪಿಯನ್ನು ಮುಂಬರುವ ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸೋಲಿಸಿ ಪಾಠ ಕಲಿಸಿ ಎಂದು ಮುಖ್ಯಮಂತ್ರಿ ಕರೆ ನೀಡಿದರು.

ಈ.ತುಕಾರಾಮ್ ನನ್ನ ಬಲವಂತಕ್ಕೆ, ಪಕ್ಷದ ಮಾತಿಗೆ ಬೆಲೆ ಕೊಟ್ಟು ಲೋಕಸಭೆಗೆ ಸ್ಪರ್ಧಿಸಿದರು. ಈ.ತುಕರಾಮ್ ಅವರು ಸಂಡೂರು ಜನತೆಯ ಮೇಲೆ ಬಹಳ ಪ್ರೀತಿ, ವಿಶ್ವಾಸ ಇಟ್ಟುಕೊಂಡಿದ್ದಾರೆ. ತುಕಾರಾಮ್ ಅವರಂತಹ ಕಾಯಕ ನಾಯಕ ನಿಮಗೆ ಬೇರೆಲ್ಲೂ ಸಿಗುವುದಿಲ್ಲ. ಹೀಗಾಗಿ ಸಂಡೂರು ಉಪಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ನಿಮ್ಮ ಆಶೀರ್ವಾದ ಹೀಗೇ ಮುಂದುವರೆಯಲಿ ಎಂದು ಅವರು ವಿನಂತಿಸಿದರು.

ಸಂಡೂರಿನ ಜನತೆಯೂ ಸೇರಿ ರಾಜ್ಯದ ಜನತೆಗೆ ಐದೈದು ಗ್ಯಾರಂಟಿಗಳನ್ನು 56 ಸಾವಿರ ಕೋಟಿ ರೂ. ವೆಚ್ಚದಲ್ಲಿ ಯಶಸ್ವಿಯಾಗಿ ಜಾರಿ ಮಾಡಿದ್ದೇವೆ. ಆದರೆ, ರಾಜ್ಯ ಸರಕಾರದ ಬಳಿ ಹಣ ಇಲ್ಲ ಎಂದು ಬಿಜೆಪಿಯ ಪೆದ್ದ ಶಿಖಾಮಣಿಗಳು ಸುಳ್ಳುಗಳನ್ನು ಎರಚುತ್ತಾ ಕುಳಿತಿದ್ದಾರೆ. ಹಾಗಿದ್ರೆ ಬರೀ ಸಂಡೂರಿನ ಅಭಿವೃದ್ಧಿಗೆ ಕಳೆದ ಒಂದು ವರ್ಷದಲ್ಲಿ ತುಕಾರಾಮ್ 1200 ಕೋಟಿ ರೂ. ಅನುದಾನ ತರಲು ಸಾಧ್ಯವಾಗುತ್ತಿತ್ತೇ ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು.

ಸಂಡೂರಿನ ಜನರ ತೆರಿಗೆ ಹಣಕ್ಕೆ, ರಾಜ್ಯದ ಜನರ ತೆರಿಗೆ ಹಣಕ್ಕೆ ಕೇಂದ್ರ ಸರಕಾರ ನಿರಂತರವಾಗಿ ವಂಚಿಸುತ್ತಿದೆ. ನಿಮಗೆ, ನಮಗೆ ಕೇಂದ್ರದಿಂದ ಬರಬೇಕಾದ ಹಣವನ್ನು ಕೊಡಿ ಎಂದು ಪ್ರಧಾನಿ ಮೋದಿಗೆ ಕೇಳುವ ಧೈರ್ಯ ರಾಜ್ಯ ಬಿಜೆಪಿ ನಾಯಕರಿಗೂ ಇಲ್ಲ, ಅವರ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರಗೂ ಇಲ್ಲ. ಇದು ಸಂಡೂರಿನ ಜನತೆಗೆ, ರಾಜ್ಯದ ಜನತೆಗೆ ಬಗೆದ ದ್ರೋಹ ಅಲ್ಲವೇ ಎಂದು ಅವರು ಪ್ರಶ್ನಿಸಿದರು.

ತೆರಿಗೆ ಕಟ್ಟುವುದರಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಆದರೆ ನಮ್ಮ ಪಾಲು ವಾಪಾಸ್ ಕೊಡುವುದರಲ್ಲಿ ಕೇಂದ್ರ ಸರಕಾರ ಕೊನೆ ಸ್ಥಾನದಲ್ಲಿರಿಸಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಉಸ್ತುವಾರಿ ಸಚಿವ ಝಮೀರ್ ಅಹ್ಮದ್ ಖಾನ್, ಕಾರ್ಮಿಕ ಸಚಿವ ಸಂತೋμï ಲಾಡ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಂಸದ ಈ.ತುಕಾರಾಮ್, ಶಾಸಕರಾದ ಲತಾ ಮಲ್ಲಿಕಾರ್ಜುನ್, ಕಂಪ್ಲಿ ಗಣೇಶ್, ಶ್ರೀನಿವಾಸ್, ನಾಗರಾಜ್, ನಾರಾ ಭರತ್ ರೆಡ್ಡಿ, ಗ್ಯಾರಂಟಿ ಅನುμÁ್ಠನ ಸಮಿತಿಯ ಉಪಾಧ್ಯಾಕ್ಷ ಎಸ್.ಆರ್.ಮೆಹ್ರೋಝ್ ಖಾನ್, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್, ಹಿರಿಯ ನಾಯಕ ಅಲ್ಲಂ ವೀರಭದ್ರಪ್ಪ, ಲಿಡ್ಕರ್ ಅಧ್ಯಕ್ಷ ನಾಗರಾಜ್ ಉಪಸ್ಥಿತರಿದ್ದರು.

(ಅಮ್ಜದ್)

……………………..

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News