ಶ್ರೀರಾಮುಲು-ರೆಡ್ಡಿ ಸಹೋದರರು ಒಗ್ಗೂಡುವ ಕಾಲ ಬಂದಿದೆ : ಕೇಂದ್ರ ಸಚಿವ ವಿ.ಸೋಮಣ್ಣ

Update: 2024-10-06 18:41 IST
ಶ್ರೀರಾಮುಲು-ರೆಡ್ಡಿ ಸಹೋದರರು ಒಗ್ಗೂಡುವ ಕಾಲ ಬಂದಿದೆ : ಕೇಂದ್ರ ಸಚಿವ ವಿ.ಸೋಮಣ್ಣ

ವಿ.ಸೋಮಣ್ಣ

  • whatsapp icon

ಬಳ್ಳಾರಿ : ಮಾಜಿ ಸಚಿವ ಬಿ.ಶ್ರೀರಾಮುಲು ಹಾಗೂ ರೆಡ್ಡಿ ಸಹೋದರರು ಶೀಘ್ರದಲ್ಲೇ ಒಂದಾಗಲಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಇಂದಿಲ್ಲಿ ತಿಳಿಸಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶ್ರೀರಾಮುಲುಗೆ ಸ್ವಲ್ಪ ಮುಂಗೋಪ ಅಷ್ಟೇ. ರೆಡ್ಡಿ ಸಹೋದರರು ಹಾಗೂ ಶ್ರೀರಾಮುಲು ಒಟ್ಟಾಗಿದ್ದಾಗ ಏನಾಗಿತ್ತು, ಬೇರೆ ಬೇರೆಯಾದಾಗ ಏನಾಗಿತ್ತೆನ್ನುವುದು ಎಲ್ಲರಿಗೂ ಗೊತ್ತಾಗಿದೆ. ಇದೀಗ ಉಭಯರು ಒಗ್ಗೂಡುವ ಸಮಯ ಬಂದಿದೆ ಎಂದರು.

ಸಾಫ್ಟ್ ಕಾರ್ನರ್ ಏನಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯರ ಬಗ್ಗೆ ಸಾಫ್ಟ್ ಕಾರ್ನರ್ ಏನು ಇಲ್ಲ. ಮುಡಾ ನಿವೇಶನ ಹಂಚಿಕೆ ಪ್ರಕರಣದ ಬಗ್ಗೆ ಪದೇ ಪದೇ ಮಾತನಾಡುವುದು ಸರಿಯಲ್ಲ. ತನಿಖೆ ಪ್ರಗತಿಯಲ್ಲಿದೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅವರಿಗೆ ಬಿಟ್ಟ ವಿಚಾರ ಎಂದು ಸೋಮಣ್ಣ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News