ಕೋವಿಡ್ ಅಕ್ರಮ | ತನಿಖೆಗೆ ಶಿಫಾರಸಿನ ಹಿಂದೆ ರಾಜಕೀಯ ದುರುದ್ದೇಶ : ಯಡಿಯೂರಪ್ಪ

Update: 2024-11-09 12:42 GMT

ಯಡಿಯೂರಪ್ಪ

ಬಳ್ಳಾರಿ : ‘ಕೋವಿಡ್ ಸಂದರ್ಭದಲ್ಲಿ ಔಷಧ ಮತ್ತು ಉಪಕರಣ ಖರೀದಿಯಲ್ಲಿ ಯಾವುದೇ ಅಕ್ರಮವು ನಡೆದಿಲ್ಲ. ಕಾನೂನು ಚೌಕಟ್ಟಿನಲ್ಲೇ ಎಲ್ಲವನ್ನು ಮಾಡಲಾಗಿದೆ. ರಾಜ್ಯ ಸರಕಾರ ತನಿಖೆಗೆ ಶಿಫಾರಸು ಮಾಡಿರುವುದರ ಹಿಂದೆ ರಾಜಕೀಯ ದುರುದ್ದೇಶ ಅಡಗಿದೆ’ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ನಾವು ಯಾವ ಹಗರಣವನ್ನೂ ಮಾಡಿಲ್ಲ. ಎಲ್ಲವನ್ನೂ ಕಾನೂನು ಚೌಕಟ್ಟಿನಲ್ಲಿ ಮಾಡಿದ್ದೇವೆ. ಅದು ತುಂಬಾ ಹಳೆಯದು, ರಾಜಕೀಯ ದುರುದ್ದೇಶದಿಂದ ಮತ್ತೆ ಅದನ್ನು ಕೆದಕುವ ಪ್ರಯತ್ನ ಮಾಡುತ್ತಿದ್ದಾರೆ. ಅದರಿಂದ ಅವರಿಗೆ ಲಾಭ ಆಗುತ್ತದೆಂಬ ನಿರೀಕ್ಷೆಯಲ್ಲಿದ್ದಾರೆ. ಅದರಿಂದ ಅವರಿಗೇನೂ ಲಾಭ ಆಗುವುದಿಲ್ಲ’ ಎಂದು ತಿಳಿಸಿದರು.

ಸರಕಾರ ಯಾವುದೇ ತನಿಖೆಗೂ ಬೇಕಿದ್ದರೆ ಕೊಡಲಿ, ತನಿಖೆಗೆ ನೀಡಿರುವ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಎಲ್ಲವನ್ನೂ ನಾವು ಕಾನೂನು ಚೌಕಟ್ಟಿನಲ್ಲಿ ಅನುಷ್ಠಾನ ಮಾಡಿದ್ದೇವೆ. ಬಿ.ಶ್ರೀರಾಮುಲು ಕೋವಿಡ್‍ನಲ್ಲಿ ಯಾವುದೇ ಹಗರಣ ಮಾಡಿಲ್ಲ. ರಾಜಕೀಯ ದ್ವೇಷಕ್ಕೆ ತನಿಖೆಗೆ ಅನುಮತಿ ನೀಡಿದ್ದಾರೆ. ಎಲ್ಲವನ್ನೂ ನಾವು ಪ್ರಾಮಾಣಿಕವಾಗಿ ನಿರ್ವಹಿಸಿದ್ದೇವೆ ಎನ್ನುವ ವಿಶ್ವಾಸವಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News