ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಚಾಲಕನ ಮೇಲೆ ತಂಡದಿಂದ ಹಲ್ಲೆ; ಪ್ರಕರಣ ದಾಖಲು

Update: 2024-04-30 04:39 GMT

ಬೆಳ್ತಂಗಡಿ; ಕೆಎಸ್ಸಾರ್ಟಿಸಿ ಬಸ್ ಚಾಲಕನ ಮೇಲೆ ತಂಡವೊಂದು ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಘಟನೆ ಪುದುವೆಟ್ಟಿನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಹಲ್ಲೆಗೆ ಒಳಗಾದ ವ್ಯಕ್ತಿಯನ್ನು ಪುದುವೆಟ್ಟು ಗ್ರಾಮದ ಬೊಲ್ಮನಾರು ನಿವಾಸಿ ಹರೀಶ್ ಕುಮಾರ್ (37) ಎಂದು ಗುರುತಿಸಲಾಗಿದೆ. ಎ.23ರಂದು ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.

ಕರ್ತವ್ಯಕ್ಕೆ ರಜೆ ಇದ್ದ ದಿನ ಕಳೆಂಜ ಗ್ರಾಮದ ಮಣಿಗೇರಿ ಹೊಳೆಯಲ್ಲಿ ಜೀಪು ತೊಳೆಯುತ್ತಿದ್ದ ವೇಳೆ ರಾತ್ರಿ 8.30ಸುಮಾರಿಗೆ ಸ್ಥಳೀಯರಾದ ಪ್ರಸನ್ನ, ಅಚ್ಚು, ಶಿವಪ್ಪ, ಉಮೇಶ್ ಗೌಡ ಎಂಬವರು ಕೈಯಿಂದ ಹಾಗೂ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಬಳಿಕ ಜೀಪನ್ನು ಅಲ್ಲಿಂದ ಮಾಣಿಗೇರಿ ರಸ್ತೆಯ ಸಮೀಪ ತಂದಿಟ್ಟು ಜೀಪಿನ ಟಯರ್ ಗಳ ಗಾಳಿಯನ್ನು ತೆಗೆದಿದ್ದಾರೆ. ಈ ಬಗ್ಗೆ ಪ್ರಶ್ನಿಸಿದಾಗ ಮತ್ತೆ ಅವರ ಮೇಲೆ ಹಲ್ಲೆ ನಡೆಸಿದ್ದು, ಹೊಯ್ಗೆ ಬಗ್ಗೆ ತಕರಾರು ತೆಗೆದರೆ ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ. ಬೊಬ್ಬೆ ಕೇಳಿ ಇತರರು ಬರುವುದನ್ನು ನೋಡಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಧರ್ಮಸ್ಥಳ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಲಾಗಿದೆ.

ಹಲ್ಲೆಯಿಂದ ಗಾಯಗೊಂಡಿರುವ ಹರೀಶ್‌ ಅವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ದ ಕಲಂ 341,323, 324, 504, 506, ಹಾಗೂ 34 ಐ.ಪಿ.ಸಿ ಯಂತೆ ಪ್ರಕರಣ ದಾಖಲಿಸಲಾಗಿದೆ.  

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News