ಬೆಂಗಳೂರು: ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ

Update: 2023-08-19 09:26 IST
ಬೆಂಗಳೂರು: ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ

ಸಾಂದರ್ಭಿಕ ಚಿತ್ರ (credit: wikimedia commons)

  • whatsapp icon

ಬೆಂಗಳೂರು, ಆ.19: ನಿಲ್ಲಿಸಿದ್ದ ಉದ್ಯಾನ್ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

ಉದ್ಯಾನ್ ಎಕ್ಸ್ಪ್ರೆಸ್ ರೈಲು ಮುಂಬೈಯಿಂದ ಇಂದು ಬೆಳಗ್ಗೆ 6 ಗಂಟೆಗೆ ಕೆಎಸ್ಆರ್ ರೈಲು ನಿಲ್ದಾಣಕ್ಕೆ ಆಗಮಿಸಿದ್ದು, ಪ್ಲಾಟ್ ಫಾರ್ಮ್ 4ರಲ್ಲಿ ನಿಂತಿತ್ತು. 7:30ರ ಸುಮಾರಿಗೆ ತಾಂತ್ರಿಕ ಸಮಸ್ಯೆಯಿಂದ ರೈಲ್ವೆ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಬೆಂಕಿ ರೈಲಿನ ಎರಡು ಕೋಚ್ಗಳಿಗೆ ಆವರಿಸಿದೆ. ಈ ವೇಳೆ ರೈಲಿನಲ್ಲಿ ಪ್ರಯಾಣಿಕರು ಯಾರೂ ಇಲ್ಲದಿದ್ದ ಕಾರಣ ಸಂಭಾವ್ಯ ಅಪಾಯ ತಪ್ಪಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ಬೆಂಕಿ ತಗುಲಿರುವ ಬೋಗಿಗಳನ್ನು ಬೇರ್ಪಡಿಸಲಾಗಿದೆ. ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಕಿಯಿಂದಾಗಿ ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News