ಎಸ್ಕಾಂಗಳಿಗೆ 11 ಸಾವಿರ ಕೋಟಿ ರೂ.ಬಾಕಿ ಉಳಿಸಿ ಹೋದ ಬಿಜೆಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2023-06-23 16:08 GMT

ಬೆಂಗಳೂರು, ಜೂ.23: ‘ಸಣ್ಣ-ಮಧ್ಯಮ ಹಾಗೂ ಸೂಕ್ಷ್ಮ ಕೈಗಾರಿಕೆಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಇಂಧನ, ಕೈಗಾರಿಕೆ ಹಾಗೂ ಕಾಸಿಯಾ ಜೊತೆಗೆ ಪ್ರತ್ಯೇಕವಾಗಿ ಸಭೆ ಕರೆದು ಚರ್ಚಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಕೆ.ಎನ್. ನರಸಿಂಹಮೂರ್ತಿ ನೇತೃತ್ವದ ನಿಯೋಗದ ಜತೆಗೆ ಚರ್ಚಿಸಿದ ಬಳಿಕ ಈ ಅವರು ವಿಷಯ ತಿಳಿಸಿದರು. ನಮ್ಮ ಸರಕಾರ ಅಧಿಕಾರಕ್ಕೆ ಬರುವ ಮುನ್ನವೆ ಕೆಇಆರ್‍ಸಿ ವಿದ್ಯುತ್ ಬೆಲೆ ಏರಿಸಿದೆ. ರಾಜಕೀಯ ಉದ್ದೇಶಕ್ಕೆ ಬಿಜೆಪಿ ತನ್ನ ತಪ್ಪನ್ನು ನಮ್ಮ ಸರಕಾರದ ಮೇಲೆ ಹೇರುತ್ತಿದೆ ಎನ್ನುವ ಸತ್ಯ ನಿಮಗೂ ಗೊತ್ತಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

ಹಿಂದಿನ ಸರಕಾರ 11 ಸಾವಿರ ಕೋಟಿ ರೂ.ಗಳ ಮೊತ್ತವನ್ನು ಎಸ್ಕಾಂಗಳಿಗೆ ಬಾಕಿ ಉಳಿಸಿದೆ. ಅವರು ಉಳಿಸಿ ಹೋದ ಹೊರೆಯನ್ನು ನಾವು ಭರಿಸಬೇಕಿದೆ. ಹಿಂದಿನ ಬಿಜೆಪಿ ಸರಕಾರದ ಆರ್ಥಿಕ ಅಶಿಸ್ತಿನಿಂದ ಆಗಿರುವ ಅನಾಹುತಗಳನ್ನು ನಾವು ಸರಿಪಡಿಸಬೇಕಿದೆ ಎಂದು ಸಿದ್ದರಾಮಯ್ಯ ಹೇಳಿದರು.

ವಿದ್ಯುತ್ ದರ ಏರಿಸಿದ ಕೆ.ಇ.ಆರ್.ಸಿ ಶಿಫಾರಸ್ಸನ್ನು ಮರುಪರಿಶೀಲಿಸುವಂತೆ ಮನವಿ ಮಾಡಲು ನಿಮಗೆ ಅವಕಾಶ ಇದೆ. ನೀವೊಮ್ಮೆ ನಿಮಗಾಗುತ್ತಿರುವ ಸಮಸ್ಯೆಗಳ ಕುರಿತು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗ(ಕೆಇಆರ್‍ಸಿ)ಕ್ಕೆ ಮನವಿ ಮಾಡಿಕೊಳ್ಳಬಹುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ನಿಯೋಗಕ್ಕೆ ಸೂಚಿಸಿದರು.

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News