ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾದ ಡಿಸಿಎಂ ಡಿ.ಕೆ ಶಿವಕುಮಾರ್

Update: 2023-06-23 15:10 GMT

ಬೆಂಗಳೂರು, ಜೂ. 23: ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್ ಅವರು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಖುದ್ದು ಭೇಟಿ ಮಾಡಿ ಅಚ್ಚರಿ ಮೂಡಿಸಿದ್ದಾರೆ.

ಶುಕ್ರವಾರ ಸಂಜೆ ಇಲ್ಲಿನ ರೇಸ್‍ಕೋರ್ಸ್ ರಸ್ತೆಯಲ್ಲಿನ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಆಗಮಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಪುಷ್ಪಾ ಗುಚ್ಛವನ್ನು ನೀಡಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.

‘ಬ್ರಾಂಡ್ ಬೆಂಗಳೂರು’ ಸಂಬಂಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಸಲಹೆ ಪಡೆಯಲು ಶಿವಕುಮಾರ್ ಅವರು ತೆರಳಿದ್ದರು ಎಂದು ಹೇಳಲಾಗಿದೆ. ಇದೇ ವೇಳೆ ಡಿ.ಕೆ.ಶಿವಕುಮಾರ್ ಅವರೂ, ಬಸವರಾಜ ಬೊಮ್ಮಾಯಿ ಅವರಿಗೂ ಶಾಲು ಹೊದಿಸಿ, ಹೂಗುಚ್ಛ ನೀಡಿ ಧನ್ಯವಾದ ತಿಳಿಸಿದರು.







 


 


 



Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News