ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ತಲೆಕೆಡಿಸಿಕೊಂಡಿಲ್ಲ: ಸಿದ್ದರಾಮಯ್ಯ
Update: 2023-09-08 09:36 GMT
ಬೆಂಗಳೂರು, ಸೆ.8: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ವಿಚಾರವಾಗಿ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಲೋಕಸಭಾ ಚುನಾವಣೆಗೆ ನಾಲ್ಕು ಸೀಟುಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ಮಾಧ್ಯಮದವರು ಗಮನಸೆಳೆದಾಗ ಮುಖ್ಯಮಂತ್ರಿ ಈ ರೀತಿ ಪ್ರತಿಕ್ರಿಯಿಸಿದರು.
ನಾವು ಜನರ ಹತ್ತಿರ ಮತ ಕೇಳುತ್ತೇವೆ. ಜನ ನಮ್ಮ ಪರವಾಗಿದ್ದಾರೆ ಎಂದು ಸಿದ್ದರಾಮಯ್ಯ ನುಡಿದರು.
ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಕ್ರವಾರ ಹೇಳಿಕೆ ನೀಡಿದ್ದಾರೆ.