ಆ್ಯಸಿಡ್ ದಾಳಿ ಸಂತ್ರಸ್ತೆಗೆ ಸಿಎಂ ಸಚಿವಾಲಯದಲ್ಲಿ ಉದ್ಯೋಗ ನೀಡಿದ ಸಿದ್ದರಾಮಯ್ಯ

Update: 2023-06-30 07:14 GMT

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು

ಬೆಂಗಳೂರು, ಜೂ.30: ಆ್ಯಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸ್ನಾತಕೋತ್ತರ ಪದವೀಧರೆಯೊಬ್ಬರಿಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಮುಖ್ಯಮಂತ್ರಿ ಸಂತ್ರಸ್ತೆಯ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ ನೀಡಿದರು.

2022ರ ಎಪ್ರಿಲ್ 28ರಂದು ಆ್ಯಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ತೆ ಎಂ.ಕಾಂ ಪದವೀಧರೆ ಆಗಿದ್ದಾರೆ. ತಂದೆ ಮತ್ತು ತಾಯಿಯ ಜತೆ ಜನತಾ ದರ್ಶನಕ್ಕೆ ಬಂದು ಮುಖ್ಯಮಂತ್ರಿಗೆ ಮನವಿ ಮಾಡಿಕೊಂಡರು.

ಹಿಂದಿನ ಸರಕಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಯವರಲ್ಲೂ ಉದ್ಯೋಗದ ಮನವಿ ಮಾಡಿದ್ದೆವು. ಅವರು ಭರವಸೆ ನೀಡಿದ್ದರು. ಆದರೆ ಉದ್ಯೋಗ ಮಾತ್ರ ಕೊಡಲಿಲ್ಲ ಎಂದು ಅಳಲು ತೋಡಿಕೊಂಡರು.

ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿ ತಮ್ಮ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News