ಬೀದರ್ | ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ; ಮೂವರು ಅಪ್ರಾಪ್ತರು ಸೇರಿ ನಾಲ್ವರ ಬಂಧನ

Update: 2025-01-04 07:19 GMT

ಅಂಬೇಡ್ಕರ್‌ ಭಾವಚಿತ್ರಕ್ಕೆ ಅವಮಾನ

ಬೀದರ್ : ಬಸವಕಲ್ಯಾಣ ತಾಲೂಕಿನ ಕಲಕೋರಾ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದ ಘಟನೆ ನಡೆದಿದ್ದು, ಮೂವರು ಅಪ್ರಾಪ್ತ ಬಾಲಕರು ಸೇರಿ ನಾಲ್ವರು ಬಂಧನವಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಲಕೋರಾ ಗ್ರಾಮದ ನಿವಾಸಿಯಾದ ಸಾಗರ್ (18) ಸೇರಿ ಮೂವರು ಅಪ್ರಾಪ್ತರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಡಿಸೆಂಬರ್ ಕೊನೆಯ ವಾರದಲ್ಲಿ ಕಲಕೋರಾ ಗ್ರಾಮದಲ್ಲಿ ಕೆಲ ಯುವಕರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಕಾಲಿನಿಂದ ತುಳಿಯುವ ಮೂಲಕ ಭಾವಚಿತ್ರ ಹರಿದು ಹಾಕಿ ಅವಮಾನ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು ಎನ್ನಲಾಗಿದೆ.

ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ನಂತರ ಜ.1ರಂದು ನಮಗೆ ಮಾಹಿತಿ ಸಿಕ್ಕಿದೆ. ತಕ್ಷಣವೇ ಪ್ರಕರಣ ದಾಖಲಿಸಿಕೊಂಡು ಒಬ್ಬ ಯುವಕ ಮತ್ತು ಮೂವರು ಅಪ್ರಾಪ್ತ ಬಾಲಕರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆ ಕುರಿತು ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News