ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ್ : ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಬೀದರ್ ಪ್ರಾದೇಶಿಕ ಕೇಂದ್ರದಲ್ಲಿ 2024-25ರ ಶೈಕ್ಷಣಿಕ ವರ್ಷದ ಜನವರಿ ಆವೃತ್ತಿಯಲ್ಲಿ ಪ್ರಥಮ ವರ್ಷಕ್ಕೆ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್.ಡಬ್ಲ್ಯೂ., ಬಿ.ಲಿಬ್.ಐ.ಎಸ್ಸಿ., ಎಂ.ಎ., ಎಂ.ಎಸ್.ಡಬ್ಲ್ಯೂ., ಎಂ.ಕಾಂ., ಎಂ.ಸಿ.ಎ., ಎಂ.ಲಿಬ್.ಐ.ಎಸ್ಸಿ., ಎಂ.ಎಸ್ಸಿ., ಎಂ.ಜಿ.ಎ. ಮತ್ತು ಯುಜಿ, ಪಿಜಿ ಹಾಗೂ ಡಿಪ್ಲೋಮಾ ಸರ್ಟಿಫಿಕೇಟ್ ಕೋರ್ಸುಗಳಿಗೆ ಪ್ರವೇಶ ಪಡೆಯಬಹುದಾಗಿದೆ ಎಂದು ಹೇಳಿದ್ದಾರೆ.
ಆಸಕ್ತ ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯಲು ವಿವಿಯ ಅಂತರ್ಜಾಲದಲ್ಲಿರುವ ಅಡ್ಮಿಷನ್ ಪೋರ್ಟಲ್ https://esouportal.com/views/studenthome.aspx ನಲ್ಲಿ ಅರ್ಜಿ ಸಲ್ಲಿಸಿ ಆಯಾ ಶಿಕ್ಷಣ ಕ್ರಮಗಳಿಗೆ ಸಿಗದಿಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆ ಅನುಸಾರ ದಾಖಲಾತಿಗಳೊಂದಿಗೆ ಬೀದರನ ಪ್ರಾದೇಶಿಕ ಕೇಂದ್ರದಲ್ಲಿ ಸಲ್ಲಿಸಿ ಪ್ರವೇಶಾತಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 99866 96487, 99012 16737 ಗೆ ಅಥವಾ ಖುದ್ದಾಗಿ ನೌಬಾದ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿ ಪ್ರವೇಶಾತಿ ಸಂಬಂಧ ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.