ಭಾಲ್ಕಿ | ಬೈಕ್‌ಗೆ ಸಾರಿಗೆ ಬಸ್ ಢಿಕ್ಕಿ: ಸವಾರ ಮೃತ್ಯು
Update: 2025-03-18 15:54 IST

ಬೀದರ್ : ಬೈಕ್‌ಗೆ ಸಾರಿಗೆ ಬಸ್ ಢಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾಲ್ಕಿ ತಾಲ್ಲೂಕಿನ ದಾಡಗಿ ಕ್ರಾಸ್ ಬಳಿ ನಡೆದಿದೆ.
ಔರಾದ್ ತಾಲ್ಲೂಕಿನ ಚೌದ್ರಿ ಬೆಳಕೂಣಿ ಗ್ರಾಮದ ನಿವಾಸಿ ಆಕಾಶ್ ದಿಲೀಪ್ (28) ಮೃತಪಟ್ಟ ಬೈಕ್ ಸವಾರನಾಗಿದ್ದಾನೆ.
ಹುಮನಾಬಾದ್ ಡಿಪೋಗೆ ಸೇರಿದ್ದ ಬಸ್ ಭಾಲ್ಕಿ ಕಡೆಗೆ ತೆರಳುತಿದ್ದ ಸಮಯದಲ್ಲಿ ದಾಡಗಿ ಕ್ರಾಸ್ ಬಳಿ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಖಟಕ್ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.