ಬೀದರ್ | ಮಾ.25 ರಂದು ಪಶುವೈದ್ಯಕೀಯ, ಪಶು, ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ 14ನೇ ಘಟಿಕೋತ್ಸವ ಕಾರ್ಯಕ್ರಮ : ಪ್ರೊ.ಕೆ.ಸಿ.ವೀರಣ್ಣ

Update: 2025-03-21 17:07 IST
Photo of Press meet
  • whatsapp icon

ಬೀದರ್ : ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವನ್ನು ಮಾ.25 ರಂದು ಆಯೋಜಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಸಿ.ವೀರಣ್ಣ ತಿಳಿಸಿದರು.

ಇಂದು ವಿಶ್ವವಿದ್ಯಾಲಯದ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಘಟಿಕೋತ್ಸವದಲ್ಲಿ ಕರ್ನಾಟಕ ರಾಜ್ಯದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಿದ್ದಾರೆ ಎಂದು ಹೇಳಿದರು.

ಈ ಘಟಿಕೋತ್ಸವದಲ್ಲಿ ಒಟ್ಟು 634 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡುತ್ತಿದ್ದು, ಇದರಲ್ಲಿ 419 ಸ್ನಾತಕ ಪದವೀಧರರು, 187 ಸ್ನಾತಕೋತ್ತರ ಹಾಗೂ 28 ಡಾಕ್ಟರೇಟ್ ಪದವಿಧರರು ಸೇರಿರುತ್ತಾರೆ. ಘಟಿಕೋತ್ಸವದ ದಿನದಂದು 127 ಪದವೀಧರರು ಉಪಸ್ಥಿತರಾಗಿ ಪದವಿ ಪಡೆಯಲಿದ್ದಾರೆ ಎಂದರು.

ಒಟ್ಟು 46 ಪ್ರತಿಭಾನ್ವಿತ ಸ್ನಾತಕ, ಸ್ನಾತಕೋತ್ತರ ಮತ್ತು ಡಾಕ್ಟರೇಟ್ ಪದವೀಧರರಿಗೆ ಚಿನ್ನದ ಪದಕ ನೀಡಿ ಗೌರವಿಸಲಾಗುತ್ತಿದ್ದು, ಅದರಲ್ಲಿ 35 ವಿಶ್ವವಿದ್ಯಾಲಯದ ಪದಕಗಳು ಮತ್ತು 61 ಪ್ರಾಯೋಜಿತ ಚಿನ್ನದ ಪದಕಗಳಾಗಿವೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುಣೆಯ ಐ.ಸಿ.ಎಮ್.ಆರ್ ರಾಷ್ಟ್ರೀಯ ವೈರಾಲಜಿ ಸಂಸ್ಥೆಯ ನಿರ್ದೇಶಕ ಡಾ.ನವೀನಕುಮಾರ್ ಹಾಗೂ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಹಾಗೂ ವಿಶ್ವವಿದ್ಯಾಲಯದ ಸಹಕುಲಾಧಿಪತಿ ಕೆ.ವೆಂಕಟೇಶ್ ಅವರು ಆಗಮಿಸುತ್ತಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪಶುವೈದ್ಯಕೀಯ, ಕುಲ ಸಚಿವ ಪಿ.ಟಿ.ರಮೇಶ್, ಆಡಳಿತ ಮಂಡಳಿ ಸದಸ್ಯ ಬಸವರಾಜ್ ಬತಮುರ್ಗೆ, ದಿಲೀಪಕುಮಾರ್ ರಾಮಪ್ಪ ಸೇರಿದಂತೆ ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News