ಬೀದರ್ | ತಂಗಿಯನ್ನು ಪ್ರೀತಿಸಿದಕ್ಕೆ ಅಣ್ಣಂದಿರಿಂದ ಯುವಕನ ಹತ್ಯೆ

ಪ್ರಶಾಂತ್ ಬಿರಾದಾರ್
ಬೀದರ್ : ಸಹೋದರಿಯನ್ನು ಪ್ರೀತಿಸಿದಕ್ಕೆ ಯುವಕನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಬಸವ ಕಲ್ಯಾಣ ತಾಲ್ಲೂಕಿನ ನಿರಗೂಡಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ನಿರಗೂಡಿ ಗ್ರಾಮದ ನಿವಾಸಿ ಪ್ರಶಾಂತ್ ಬಿರಾದಾರ್ (25) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ಪ್ರಶಾಂತ್ ಕಳೆದ ಕೆಲ ವರ್ಷಗಳಿಂದ ತಮ್ಮ ಪಕ್ಕದ ಮನೆಯ ಯುವತಿಯನ್ನು ಪ್ರೀತಿಸುತ್ತಿದ್ದನ್ನು, ಇದರಿಂದ ಕೋಪಗೊಂಡ ಯುವತಿಯ ಸಹೋದರರು, ತಮ್ಮ ಸಹೋದರಿಯೊಂದಿಗಿನ ಸಂಬಂಧ ಬಿಟ್ಟು ಬಿಡುವಂತೆ ಈ ಹಿಂದೆ ಹಲವು ಬಾರಿ ಸೂಚಿಸಿದ್ದರು. ಇಷ್ಟಾದರೂ ಕೂಡ ಪ್ರಶಾಂತ್ ತನ್ನ ಪ್ರೀತಿ ಮುಂದುವರೆಸಿದ್ದ. ಇದರಿಂದ ಕೋಪಗೊಂಡ ಯುವತಿ ಸಹೋದರರಾದ ಯಲ್ಲಾಲಿಂಗ್ ಹಾಗೂ ಪ್ರಶಾಂತ್ ಎನ್ನುವವರು ಶುಕ್ರವಾರ ರಾತ್ರಿ ಗ್ರಾಮದ ವಾಲ್ಮೀಕಿ ವೃತ್ತದ ಬಳಿ ಪ್ರಶಾಂತ್ ನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.