ಬೀದರ್ | ಔರಾದ್ ನಲ್ಲಿ 5 ಕೆಜಿ ಗಾಂಜಾ ಜಪ್ತಿ; ಇಬ್ಬರ ಬಂಧನ

Update: 2024-12-26 16:50 GMT

ಬೀದರ್ : ಔರಾದ್ ತಾಲ್ಲೂಕಿನ ಬೆಳಕುಣಿ(ಚೌ)-ಮುಂಗನಾಳ ಮಾರ್ಗವಾಗಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಔರಾದ್ ಪೊಲೀಸರು ಬಂಧಿಸಿದ್ದಾರೆ.

ಚೀಲದಲ್ಲಿ ಗಾಂಜಾ ತುಂಬಿಕೊಂಡು ಬೈಕ್ ಮೇಲೆ ತೆರಳುತ್ತಿರುವಾಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಬಂಧಿತರಿಂದ ಸೂಮಾರು 5 ಲಕ್ಷ ರೂ. ಮೌಲ್ಯದ ಗಾಂಜಾ ಹಾಗೂ ಒಂದು ದ್ವಿಚಕ್ರ ವಾಹನ ಜಪ್ತಿ ಮಾಡಿಕೊಳ್ಳಲಾಗಿದೆ. ಇಬ್ಬರು ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಇನ್ನೊಬ್ಬ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ತಹಶೀಲ್ದಾರ್ ಮಲ್ಲಶೆಟ್ಟಿ ಚಿದ್ರೆ, ಪಿಎಸ್ಐ ವಸೀಮ್ ಪಟೇಲ್ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.

ಘಟನೆಗೆ ಸಂಬಂಧಿಸಿದಂತೆ ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News