ಬೀದರ್ | ಸವರ್ಣೀಯರಿಂದ ದಲಿತರ ಮೇಲೆ ಹಲ್ಲೆ ಪ್ರಕರಣ : ಗ್ರಾಮದಲ್ಲಿ ಜಿಲ್ಲಾಡಳಿತದಿಂದ ಶಾಂತಿ ಸಭೆ

Update: 2024-11-06 17:54 GMT

ಬೀದರ್ : ಹನುಮಾನ್ ಜಾತ್ರಾ ಮಹೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಸವರ್ಣೀಯರು ಮತ್ತು ಪರಿಶಿಷ್ಟ ಜಾತಿಯವರ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಗ್ರಾಮದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಭೆ ಜರುಗಿತು.

ಭಾಲ್ಕಿ ತಾಲ್ಲೂಕಿನ ಚಳಕಾಪುರ ಗ್ರಾಮದ ಘಟನೆಗೆ ಸಂಬಂಧಿಸಿದಂತೆ 69 ಜನರನ್ನು ಪೊಲೀಸರು ಬಂಧಿಸಿದ್ದು, 192 ಜನರ ವಿರುದ್ಧ ದೂರು ಪ್ರತಿ ದೂರು ದಾಖಲಾಗಿದೆ. ಖಟಕ ಚಿಂಚೋಳಿ ಪೊಲೀಸ್ ಠಾಣೆಯ ಪಿಎಸ್ಐ ಸೇರಿ ನಾಲ್ವರು ಪೊಲೀಸರನ್ನು ಅಮಾನತು ಮಾಡಿರುವ ಬೆಳವಣಿಗೆ ಮಂಗಳವಾರ ನಡೆದಿತ್ತು. ಅಲ್ಲದೇ ಗ್ರಾಮದಲ್ಲಿ ಉದ್ವಿಗ್ನಸ್ಥಿತಿ ಸಹ ನಿರ್ಮಾಣವಾಗಿತ್ತು.

ಬುಧವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಹೇಶ ಮೇಘಣ್ಣನವರ ಸೇರಿದಂತೆ ಹಿರಿಯ ಅಧಿಕಾರಿಗಳಿಂದ ಗ್ರಾಮದಲ್ಲಿ ಶಾಂತಿ ಸಭೆ ನಡೆಸಿ ಘಟನೆಗೆ ಕಾರಣರಾದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದು, ಮುಗ್ಧ ಮತ್ತು ಅಮಾಯಕರಿಗೆ ವಿನಾಕಾರಣ ತೊಂದರೆ ನೀಡುವುದಿಲ್ಲ. ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ನೆಲೆಸಲು ಸಹಕರಿಸಬೇಕೆಂದು ಸೂಚಿಸಿದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News