ಬೀದರ್ | ಬಾವಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
Update: 2025-01-14 13:33 GMT
ಬೀದರ್ : ಬಾವಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಬಸವಕಲ್ಯಾಣ ತಾಲ್ಲೂಕಿನ ಕೊಹಿನೂರ್ ಗ್ರಾಮದಲ್ಲಿ ನಡೆದಿದೆ.
ಬಸಯ್ಯ ರಾಚಯ್ಯ ಗಣಾಚಾರಿ (52) ಮೃತ ವ್ಯಕ್ತಿ ಎಂದು ತಿಳಿದುಬಂದಿದೆ.
ಬಸಯ್ಯ ಕಳೆದ ಮೂರು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದರು. ಮನೆ ಬಿಟ್ಟು ಹೋದ ದಿನವೇ ಆತ ಬಾವಿಗೆ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಮೂಲತಃ ಈತ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಖಜೂರಿ ಗ್ರಾಮದ ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಈತ ಕುಟುಂಬ ಸಹಿತವಾಗಿ ಕೊಹಿನೂರ್ ಗ್ರಾಮದಲ್ಲಿ ಬಂದು ನೆಲೆಸಿದ್ದ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಮಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.