ಬೀದರ್ | ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿಗೆ ಹೆಸರು ನೋಂದಾಯಿಸಲು ಮನವಿ
Update: 2025-04-01 18:43 IST

ನಾಗೇಶ್ ಎಂ.
ಬೀದರ್ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐಎಎಸ್ ಹಾಗೂ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಹೆಸರು ನೋಂದಾಯಿಸಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕ ನಾಗೇಶ್ ಎಂ. ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ತರಬೇತಿಗಾಗಿ ಮೈಸೂರಿನ ಕೇಂದ್ರ ಕಚೇರಿಯಲ್ಲಿ 50 ದಿನಗಳ ತರಬೇತಿ ನಡೆಸಲು ನಿರ್ಧರಿಸಲಾಗಿದೆ. ಹಾಗಾಗಿ ಆಸಕ್ತರು ಹೆಸರು ನೋಂದಾಯಿಸಬಹುದು ಎಂದು ಅವರು ಹೇಳಿದ್ದಾರೆ.
ಆಸಕ್ತರು ಏ.2 ರ ಒಳಗಾಗಿ ದೂರವಾಣಿ ಸಂಖ್ಯೆ: 0821-2515944 ಗೆ ಕರೆ ಮಾಡುವ ಮೂಲಕ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.