ಬೀದರ್ | ಅಕ್ರಮ ಮಣ್ಣು ಸಾಗಣೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಮನವಿ
Update: 2025-03-20 17:31 IST

ಬೀದರ್ : ಕಮಲನಗರ ತಾಲ್ಲೂಕಿನ ನಿಡೋದಾ ಗ್ರಾಮದಲ್ಲಿರುವ ಕೆರೆಯಲ್ಲಿನ ಮಣ್ಣು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದಾರೆ. ಹೀಗಾಗಿ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಚರಣಜೀತ್ ಆಣದೂರೆ ಮನವಿ ಮಾಡಿದ್ದಾರೆ.
ಇಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಅಕ್ರಮ ಮಣ್ಣು ಸಾಗಣೆ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಂಡು, ಮಣ್ಣು ಸಾಗಿಸಲು ಬಳಸುತ್ತಿದ್ದ ವಾಹನವನ್ನು ವಶಕ್ಕೆ ಪಡೆಯಬೇಕು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.
ಒಂದು ವೇಳೆ ತಾವು ಕೂಡಲೇ ಇದರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ, ಜಿಲ್ಲಾದ್ಯಂತ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸದರು.