ಬೀದರ್ | ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗಕ್ಕಾಗಿ ನೇರ ಸಾಲಕ್ಕೆ ಅರ್ಜಿ ಆಹ್ವಾನ
Update: 2024-12-13 13:36 GMT
ಬೀದರ್ : ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಸಮುದಾಯದ ಜನರಿಗೆ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಕುರಿ ಸಾಕಾಣಿಕೆ ಹಾಗೂ ಸ್ವಾವಲಂಬಿ ಸಾರಥಿ (ಪುಡ್ ಕಾರ್ಟ್ ಉದ್ದೇಶಕ್ಕಾಗಿ) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲೆಯ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿಗಳನ್ನು ಸಲ್ಲಿಸಬೇಕಾದ ಅರ್ಹ ಫಲಾಪೇಕ್ಷಿಗಳು ಕರ್ನಾಟಕ ಒನ್/ಗ್ರಾಮ ಒನ್/ ಸೇವಾ ಸಿಂಧುವಿನಲ್ಲಿ ಅನ್ಲೈನ್ ಮುಖಾಂತರ ಡಿ.29 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.