ಬೀದರ್ | ಪ್ರವಾಸಿ ಮಾರ್ಗದರ್ಶಿ ತರಬೇತಿಗಾಗಿ ಅರ್ಜಿ ಅಹ್ವಾನ

ಬೀದರ್ : ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಗೆ 1 ತಿಂಗಳ ಪ್ರವಾಸಿ ಮಾರ್ಗದರ್ಶಿ ತರಬೇತಿಗಾಗಿ ಅರ್ಜಿ ಅಹ್ವಾನಿಸಲಾಗಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಲ್ಲಿಸಬೇಕಾದ ದಾಖಲಾತಿಗಳು :
10ನೇ ತರಗತಿಯ ಅಂಕಪಟ್ಟಿಯ ಪ್ರತಿ, ಪದವಿ ಪೂರ್ವ ಶಿಕ್ಷಣದ ಅಂಕಪಟ್ಟಿ ಪ್ರತಿ, ತಹಶೀಲ್ದಾರರಿಂದ ಪಡೆದ ಜಾತಿ, ಆದಾಯ ಮತ್ತು ವಾಸಸ್ಥಳ ಪ್ರಮಾಣ ಪತ್ರ, ನಿರುದ್ಯೋಗ ಪ್ರಮಾಣ ಪತ್ರದ ಪ್ರತಿ, ಪಡಿತರ ಚೀಟಿ, ಆಧಾರ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಬ್ಯಾಂಕ್ ಖಾತೆ ಪಾಸ್ ಪುಸ್ತಕದ ಪ್ರತಿ ಹಾಗೂ ಅನುಭವ ಪ್ರಮಾಣ ಪತ್ರದ ಪ್ರತಿ.
ಆಸಕ್ತರು ಪ್ರವಾಸೋದ್ಯಮ ಇಲಾಖೆಯ ಕಚೇರಿಯಿಂದ ಅರ್ಜಿ ಪಡೆದು, ಅಗತ್ಯ ದಾಖಲಾತಿಗಳೊಂದಿಗೆ ಏ.4 ರ ಒಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಧಿಕಾರಿಗಳ ಕಾರ್ಯಾಲಯ ಬೀದರ್ ಇಲ್ಲಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆಯನ್ನು ಸಂಪರ್ಕ ಮಾಡಲು ಅವರು ತಿಳಿಸಿದ್ದಾರೆ.