ಬೀದರ್ | ಮೇಸನ್ ಕೀಟ್‌ಗಳಿಗಾಗಿ ಕಾರ್ಮಿಕರಿಂದ ಅರ್ಜಿ ಆಹ್ವಾನ

ಬೀದರ್ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮೆಸನ್ ಕಿಟ್‌ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಉಪ ವಿಭಾಗದ ಕಾರ್ಮಿಕ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಕಚೇರಿಯಿಂದ ಸ್ವೀಕೃತಿಯಾದ 1 ಸಾವಿರ ಮೇಸನ್ ಕೀಟ್‌ಗಳನ್ನು ಪ್ರತಿ ಕಾರ್ಮಿಕ ನಿರೀಕ್ಷಕರ ಕಚೇರಿಗಳಿಗೆ 200 ಕಿಟ್‌ಗಳಂತೆ ಹಂಚಿಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅರ್ಹರು ಏ.5 ರ ಒಳಗಾಗಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ತಮ್ಮ ಚಾಲ್ತಿಯಲ್ಲಿರುವ ಹಾಗೂ E-KYC ಮಾಡಿರುವ ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಹಾಗೂ ಆಧಾರ ಕಾರ್ಡ ಝಿರಾಕ್ಸ್ ಪ್ರತಿಯೊಂದಿಗೆ ಆಯಾ ಕಾರ್ಮಿಕ ನಿರೀಕ್ಷಕರ ಕಚೇರಿಗಳಾದ ಬೀದರ್, ಭಾಲ್ಕಿ, ಔರಾದ್ (ಬಿ), ಹುಮನಾಬಾದ್ ಮತ್ತು ಬಸವಕಲ್ಯಾಣದಲ್ಲಿ ಅರ್ಜಿ ಸಲ್ಲಿಸಬೇಕು. ಸ್ವೀಕೃತಿಯಾದ ಅರ್ಜಿಗಳನ್ನು ಪಟ್ಟಿ ಮಾಡಿ ಜೇಷ್ಠತೆ ಆಧಾರದ ಮೇಲೆ ಮೇಷನ್ ಹಂಚಿಕೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.