ಬೀದರ್ | ಮಕ್ಕಳ ಪ್ರತಿಭೆ ಗುರುತಿಸಲು ಬಾಲಮೇಳ ಸೂಕ್ತ ವೇದಿಕೆ : ಗಿರೀಶ್ ಬದೋಲೆ

Update: 2024-11-17 17:09 GMT

ಬೀದರ್ : ಪುಟ್ಟ ಮಕ್ಕಳ ಬಾಲ ಪ್ರತಿಭೆಯನ್ನು ಗುರುತಿಸಲು ಬಾಲಮೇಳಗಳು ಸೂಕ್ತ ವೇದಿಕೆಯಾಗಿವೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಗಿರೀಶ್ ಬದೋಲೆ ಅವರು ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಹಾಗೂ ಕಲಿಕೆ ಟಾಟಾ ಟ್ರಸ್ಟ್ ಬೆಂಗಳೂರು ಸಹಯೋಗದಲ್ಲಿ ಚಿಟ್ಟಾ ಗ್ರಾಮ ಪಂಚಾಯತ್ ವ್ಯಾಪ್ತಿಯ ತಾಲ್ಲೂಕಿನ ಗೋಡಂಪಳ್ಳಿ ವಲಯದ ಚಿಟ್ಟಾವಾಡಿಯಲ್ಲಿ ಹಮ್ಮಿಕೊಂಡಿರುವ ಮಕ್ಕಳ ದಿನಾಚರಣೆ ಮತ್ತು ಬಾಲಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಆಯೋಜಿಸಿರುವ ಬಾಲಮೇಳದ ಮೂಲಕ ಮುಗ್ಧಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಜವಾಬ್ದಾರಿಯನ್ನರಿತು ಗುಣಮಟ್ಟದ ಶಾಲಾಪೂರ್ವ ಶಿಕ್ಷಣ ಹಾಗೂ ಇಲಾಖೆ ಒದಗಿಸಿದ ಪೌಷ್ಟಿಕ ಆಹಾರ ನೀಡುವುದರೊಂದಿಗೆ ಪಂಚಾಯತ್ ಮಟ್ಟದಲ್ಲಿ ಬಾಲ ಮೇಳ ಆಯೋಜಿಸಿ ಮಕ್ಕಳ ಕಲಿಕೆ ಮತ್ತು ಸಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶನ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಮುಖ್ಯ ಅತಿಥಿಗಳಾಗಿದ್ದ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ್ ಎಮ್.ಎಸ್. ಅವರು ಮಾತನಾಡಿ, ಶಾಲಾ ಪೂರ್ವ ಶಿಕ್ಷಣ ಕಾರ್ಯಕ್ರಮವು 2018ನೇ ಸಾಲಿನಿಂದ ಪ್ರಾರಂಭವಾಗಿದ್ದು, ಮೇಲ್ವಿಚಾರಕಿಯರ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸಾಮಥ್ರ್ಯ ಅಭಿವೃದ್ಧಿ ಮಾಡುವ ಮುಖಾಂತರ ಅಂಗನವಾಡಿ ಕೇಂದ್ರದ ಮಕ್ಕಳ ಶಾಲಾ ಪೂರ್ವ ಶಿಕ್ಷಣ ಪೂರ್ವ ಶಿಕ್ಷಣದ ಗುಣಮಟ್ಟವನ್ನು ಅಭಿವೃದ್ಧಿಪಡಿಸುವುದಾಗಿದೆ ಎಂದರು.

ಬಾಲಮೇಳದಲ್ಲಿ 3 ಗ್ರಾಮದ 10 ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಅಂಗನವಾಡಿ ಮಕ್ಕಳೊಂದಿಗೆ, ಶಾಲಾ ಪೂರ್ವ ಶಿಕ್ಷಣ ಚಟುವಟಿಕೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶನ ಮಾಡಿದರು. ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು ಕೂಡ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಲಿಕೆ ಟಾಟಾ ಟ್ರಸ್ಟ್‌ನ ಜಿಲ್ಲಾ ವ್ಯವಸ್ಥಾಪಕಿ ಶ್ರೀಮತಿ ಮಲ್ಲಮ್ಮ ಬಿರಾದರ್ ಅವರು ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಟ್ಟಾ ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ ಘಾಳೆಪ್ಪ ಅವರು ವಹಿಸಿದ್ದರು. ಅತಿಥಿಗಳಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾರದಾ ಎನ್.ಕಲಮಲ್ಕರ್, ಚಿಟ್ಟಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಮೇಶ್ ಬಿರಾದಾರ್, ಮತ್ತಿತರರು ಭಾಗವಹಿಸಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News