ಬೀದರ್ | ಬಸ್ ಢಿಕ್ಕಿ : ಬೈಕ್ ಸವಾರ ಮೃತ್ಯು
Update: 2024-11-28 16:23 GMT
ಬೀದರ್ : ಹಿಂಬದಿಯಿಂದ ಬಂದ ಮಹಾರಾಷ್ಟ್ರದ ಸಾರಿಗೆ ಬಸ್ ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಶಿವನಗರ ಸಿಗ್ನಲ್ ಬಳಿ ಗುರುವಾರ ಸಂಜೆ ನಡೆದಿದೆ.
ಭಾಲ್ಕಿ ತಾಲೂಕಿನ ಕೋನಮೇಳಕುಂದಾ ಗ್ರಾಮದ ನಿವಾಸಿ ಅನೀಲಕುಮಾರ್ ಪಂಚಾಳ (34) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಆಟೋದಲ್ಲಿ ಬರುವಂತೆ ತಿಳಿಸಿ ಪ್ರತಾಪ ನಗರದಿಂದ ಗುಂಪಾ ಕಡೆಗೆ ಆಕ್ಟಿವಾ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಬಸ್ ಢಿಕ್ಕಿ ಹೊಡೆದ ರಭಸಕ್ಕೆ ಸವಾರ ಬಸ್‌ನ ಚಕ್ರ ವ್ಯಕ್ತಿ ಮೇಲೆ ಹಾಯ್ದು ಹೊಗಿರುವ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.